

5 ವರ್ಷ CM ಯಾರು ಅನ್ನೋಂದು ಹೈಕಮಾಂಡ ತೀರ್ಮಾನ ಮಾಡುತ್ತಾರೆ | ಎಂ.ಬಿ ಪಾಟೀಲ
ಬೆಂಗಳೂರು : ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರು ಮುಂದುವರಿಯುವುದು ಅಥವಾ ಬೇರೆ ಯಾರೇ ಮುಖ್ಯಮಂತ್ರಿ ಆಗುವುದು ಕಾಂಗ್ರೆಸ್ ಹೈಕಮಾಂಡ ಕೈಯಲ್ಲಿ ಹೊರತು ಸಚಿವ ಜಮೀರ ಅಹ್ಮದ ಖಾನ್ ಅಥವಾ ನನ್ನ ಕೈಯಲ್ಲಿ ಇಲ್ಲ ಎಂದು ಸಚಿವ ಎಂಬಿ ಪಾಟೀಲ ಅವರು ಹೇಳಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟವಾಗಿ ಹೇಳಿದ್ದಾರೆ ನಮ್ಮಲ್ಲಿ ಹೈಕಮಾಂಡ ನಿರ್ಧಾರವೇ ಅಂತಿಮ ತೀರ್ಮಾನ, ಹೈಕಮಾಂಡ ಏನು ಹೇಳುತ್ತೆ, ಅದೇ ನಡೆಯುತ್ತೆ,ಗ್ಯಾರಂಟಿ ವಿಚಾರದಲ್ಲಿ ಪ್ರತಿಪಕ್ಷದ ಟೀಕೆಗೆ ಉತ್ತರಿಸಿದ ಅವರು, ಮಾಜಿ ಪ್ರಧಾನಿ ದೇವೆಗೌಡ್ರು ಪ್ರಧಾನಿ…

ಜಲಾವೃತ್ತ ನಾಯ್ಕಲ್ ಗ್ರಾಮದ ಮನೆಗಳಿಗೆ ಜಮಾದಾರ ಭೇಟಿ: ಸಾಂತ್ವನ, ಭರವಸೆ
ಯಾದಗಿರಿ: ನಿರಂತರ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿರುವ ವಡಗೇರಿ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲಾವೃತ್ತ ಪ್ರದೇಶಗಳಿಗೆ ಕೆಪಿಸಿಸಿ ರಾಜ್ಯ ಸಂಯೋಜಕ ಮತ್ತು ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೈನುದ್ದಿನ್ ಎಂ. ಜಮಾದಾರ ದೋರನಳ್ಳಿ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಪಾರ ಮಳೆಯಿಂದಾಗಿ ಭೀಮಾನದಿ ನೀರು ಹೊಲ ಗದ್ದೆಗಳಿಗೆ ಅಲ್ಲದೇ ಮನೆಗಳಿಗೆ ನುಗ್ಗಿದ್ದು, ಅಪಾರ ನಷ್ಟವಾಗಿದೆ, ಸತತ ಮಳೆಯ ಕಾರಣ ವಡಗೇರಿ ತಾಲ್ಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಅದರಲ್ಲೂ ನಾಯ್ಕಲ್…

ಕ್ಷಯ ರೋಗದ ಬಗ್ಗೆ ಭಯ ಬೇಡ:ಡಾ. ಸಂಜೀವಕುಮಾರ್
ಸ್ವಸ್ಥ ನಾರಿ ಸಶಕ್ತ ಪರಿವಾರ : ಉಚಿತ ಪೌಷ್ಟಿಕ ಆಹಾರ ವಿತರಣೆ ಸುರಪುರ : ಕ್ಷಯ ರೋಗವನ್ನು ಗುಣಪಡಿಸಬಹುದು ಯಾರು ಇದರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಸಂಜೀವಕುಮಾರ್ ರಾಯಚೂರಕರ್ ಮಾತನಾಡಿದರು.ತಾಲೂಕಿನ ಹೆಮನೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮ ಯಾದಗಿರಿ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸುರಪುರ ಇವರುಗಳ…

ಒಂದೇ ಎಂಬ ಭಾವಬಂದಾಗ ಸದೃಡ ರಾಷ್ಟç ನಿರ್ಮಾಣ-ಅಗಸರ
ತಾಳಿಕೋಟೆ, ಎಲ್ಲ ಸಮುದಾಯದವರು ಜಾತಿ, ಮತ, ಪಂಥವೆನ್ನದೇ ನಾವೆಲ್ಲರೂ ಒಂದೇ ಎಂಬ ಭಾವ ಬೆಳೆಸಿಕೊಂಡಾಗ ಮಾತ್ರ ಬಲಿಷ್ಠ ರಾಷ್ಟçವಾಗಲು ಸಾದ್ಯವೆಂದು ರಾಷ್ಟಿçÃಯ ಸೇವಾ ಯೋಜನೆಯ ಜಿಲ್ಲಾ ಸಂಯೋಜನಾಧಿಕಾರಿಗಳಾದ ಗಂಗಾಧರ ಅಗಸರ ಹೇಳಿದರು. ಪಟ್ಟಣದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಿಂದ ಆಶ್ರಯ ಕಾಲೋನಿಯಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡ ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದ ಅವರು ಧರ್ಮ. ಆಚಾರ ಸಂಸ್ಕಾರವನ್ನು ಯುವಕರು ಮೈಗೂಡಿಸಿಕೊಳ್ಳಬೇಕು. ದುಶ್ಚಟಗಳಿಗೆ ದಾಸರಾಗದೆ ಆರೋಗ್ಯದ ಕಡೆ…

ಕೃಷ್ಣಾ ನದಿಗೆ 1, ಲಕ್ಷ 34,ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಯಾದಗಿರಿ : ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿರುವ ಹಿನ್ನೆಲೆಯಲ್ಲಿ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಬಂದಿದ್ದೆ ಬಸವಸಾಗರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದ್ದು, ಕೃಷ್ಣಾ ನದಿಗೆ ಸೋಮವಾರ 1, ಲಕ್ಷ 34,ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಕೃಷ್ಣಾ ನದಿ ದಡಕ್ಕೆ ಯಾರು ತೆರಳದಂತೆ ಜಲಾಶಯದ ಅಧಿಕಾರಿಗಳಿಂದ ಎಚ್ಚರಿಕೆ ನೀಡಿದ್ದಾರೆ

ಮಳೆ ಹಾಗೂ ಪ್ರವಾಹ ಹಿನ್ನೆಲೆ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ.
ಕಲಬುರಗಿ ಜಿಲ್ಲೆಯಲ್ಲಿ ಸೆಪ್ಟೆಂಬರ ತಿಂಗಳಲ್ಲಿ ಶೇ. 63 ರಷ್ಟು ಹೆಚ್ಚು ಮಳೆ ತುರ್ತು ಪರಿಹಾರ, ಮುಂಜಾಗರೂಕತ ಕ್ರಮ ತೆಗೆದುಕೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ. ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ. 69…

2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ
ಬೆಂಗಳೂರು : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು,…

ಗುರುಮಠಕಲ್ ನಲ್ಲಿ ಧಾರ್ಮಿಕ ಸಂಭ್ರಮದಲ್ಲಿ ಮಹಾಲಕ್ಷ್ಮಿ ಹಾಗೂ ಭವಾನಿಮಾತೆಯ ಪೂಜೆ
ಗುರುಮಠಕಲ್ ಪಟ್ಟಣದಲ್ಲಿ ನವರಾತ್ರಿ ಉತ್ಸವ ಭಕ್ತಿಭಾವದಿಂದ ಮತ್ತು ವೈಭವದಿಂದ ಜರಗಿತು. ಗುರುಮಠಕಲ್: ಪಟ್ಟಣದ ಲಕ್ಷೀನಗರ ಬಡಾವಣೆಯ ಮಹಾಲಕ್ಷ್ಮಿ ದೇವಾಲಯದಲ್ಲಿ ಭಕ್ತಿಪೂರ್ಣ ಲಕ್ಷ್ಮಿ ದೇವಿಯ ಮತ್ತು ಅಂಕಮ್ಮ ದೇವಸ್ಥಾನದಲ್ಲಿ ಹಾಗೂ ಗಣೇಶ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಗುರುಮಠಕಲ್ ಯುವ ಮುಖಂಡ ರಾಜ ರಮೇಶ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. ಭಕ್ತಿಪೂರ್ಣ ವಾತಾವರಣದಲ್ಲಿ ನೂರಾರು ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪ್ರಾರ್ಥಿಸಿದರು. ಪಟ್ಟಣದ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜ ಅಂಕಮ್ಮ ದೇವಾಲಯ…

ಶಿಕ್ಷಕರೆ ದೇಶದ ಶಿಲ್ಪಿಗಳು: ಸುರೇಶ ಗೌರೆ
ಆಳಂದ: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದದ್ದು, ಅವರು ವಿದ್ಯಾರ್ಥಿಗಳ ಜೀವನದ ನಿಜವಾದ ಶಿಲ್ಪಿಗಳು ಎಂದು ಕರ್ನಾಟಕ ಗೌರವ ಪತ್ರಿಕೆಯ ಸಂಪಾದಕ ಸುರೇಶ ಗೌರೆ ಹೇಳಿದರು. ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ‘ಕಲಬುರಗಿ ಪ್ರಭ’ ಪತ್ರಿಕೆ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿಯರಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ, ಭವಿಷ್ಯದ ಕನಸುಗಳಿಗೆ ಪೋಷಣೆ ನೀಡುವ ಮಹಾನ್ ಸೇವೆ ಎಂದು ಅವರು ಬಣ್ಣಿಸಿದರು. ಫಾತಿಮಾ ಶೇಖ್ ಮತ್ತು ಸಾವಿತ್ರಿಬಾಯಿ ಫುಲೆ…

ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ 8,500 ರೂ. ಹೆಚ್ಚುವರಿ ಪರಿಹಾರ : ಸಿದ್ದರಾಮಯ್ಯ
ರಾಜ್ಯದಾದ್ಯಂತ ಅತಿವೃಷ್ಠಿಯಿಂದ 10 ಲಕ್ಷ ಹೆಕ್ಟೇರಿಗೂ ಹೆಚ್ಚು ಬೆಳೆ ಹಾನಿ ಕಲಬುರಗಿ : ರಾಜ್ಯದಾದ್ಯಂತ ಪ್ರಸಕ್ತ ಸಾಲಿನ ಜೂನ್ ಮಾಹೆಯಿಂದ ಇಲ್ಲಿಯ ವರೆಗೆ ಅತಿವೃಷ್ಠಿ ಮತ್ತು ವ್ಯಾಪಕ ಮಳೆಯಿಂದ ಪ್ರಾಥಮಿಕ ವರದಿ ಪ್ರಕಾರ 10 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಎನ್.ಡಿ.ಆರ್.ಎಫ್. ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ…