ಬೀದರ : ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಭಾವಗಳ ಅತ್ಯುಚ್ಚ ಆದರ್ಶ ಮತ್ತು ಧೈಯ ಒಳಗೊಂಡಿರುವ ಭಾರತದ ಲಿಖಿತ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾಗಿದೆ. ಇಂದು ಎಲ್ಲ, ಜಾತಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಲಭಿಸುತ್ತಿದ್ದರೆ ಅದಕ್ಕೆ ನಮ್ಮ ಪರಮಪವಿತ್ರವಾದ ಸಂವಿಧಾನವೇ ಕಾರಣ. ಎಂದು ಸಚಿವ ಈಶ್ವರ ಬಿ ಖಂಡ್ರೆ ಅವರು ಹೇಳಿದರು. ಅವರು 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ. ನೆಹರು ಕ್ರಿಡಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ, ನಂತರ ಜಿಲ್ಲಾ ಪೋಲಿಸ್ ಪಡೆಯಿಂದ ಗೌರವ ವಂದನೆ ಸ್ವೀಕರಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಸಂವಿಧಾನ ಹಲವು ವೈಶಿಷ್ಟ್ಯತೆಗಳಿಂದ ಕೂಡಿದೆ. ಇಷ್ಟು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಹೊಂದಿರುವ ಲಿಖಿತ ಸಂವಿಧಾನದಂತಹ ಯಾವುದೇ ಗೊಂದಲ, ಇಲ್ಲದ ಸಂವಿಧಾನ ಬೇರೆ ಯಾವ ರಾಷ್ಟ್ರದಲ್ಲೂ ಇಲ್ಲ, ಇದಕ್ಕೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಶ್ರಮ ಕಾರಣವಾಗಿದೆ. ನಮ್ಮ ಸಂವಿಧಾನ ಭಾರತದ ಎಲ್ಲ ಪ್ರಜೆಗಳಿಗೂ ಬದುಕುವ ಸಮಾನಹಕ್ಕು ಕಲ್ಪಿಸಿದೆ. ಹಲವು ಮೂಲಭೂತ ಹಕ್ಕುಗಳನ್ನು ನೀಡಿದೆ. ಅದೇ ರೀತಿ ನಮ್ಮ ಕರ್ತವ್ಯಗಳೇನು ಎಂಬುದನ್ನೂ ತಿಳಿಸಿಕೊಟ್ಟಿದೆ. ಎಂದು ಹೇಳಿ ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ಕೈಗೆತಿಕೊಂಡ ವಿವಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿವರಿಸಿದರು.
ಭಾರತದ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾಗಿದೆ | ಸಚಿವ ಈಶ್ವರ ಖಂಡ್ರೆ


