ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಸಚಿವ ಪ್ರಿಯಾಂಕ್ ಖರ್ಗೆ.
ಕಲಬುರಗಿ : ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರವಾಗಿದೆ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು ಹೆಸರು ಮಾಡಿದೆ. ಹೆಚ್ ಎ ಎಲ್ ಹಾಗೂ ಇಸ್ರೋದಂತಹ ಮಹತ್ತರ ಸಂಸ್ಥೆಗಳನ್ನು ಹೊಂದಿರುವ ಹೆಗ್ಗಳಿಕೆ ರಾಜ್ಯಕ್ಕೆ ಇದೆ. ಜೊತೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಾಂತ್ರಿಕ ಅವಶ್ಯಕತೆಗಳ ತಯಾರಿಕೆ ಹಾಗೂ ರಕ್ಷಣಾ ಕ್ಷೇತ್ರದ ಸಂಶೋಧನೆಯಲ್ಲಿ ಶೇ 60 ರಷ್ಟು ಕೊಡುಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ಪಟ್ಟರು. ಕಲಬುರಗಿಯ ಜಿಲ್ಲಾಧಿಕಾರಿ…


