ತಾಲ್ಲೂಕಾ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದರ್ಶನಾಪೂರ
ಯಾದಗಿರಿ : ನೂತನ ತಾಲ್ಲೂಕಾ ಕೇಂದ್ರವಾಗಿರುವ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಕಂದಾಯ ಇಲಾಖೆಯಿಂದ ವಡಗೇರಾ ಪಟ್ಟಣದಲ್ಲಿ ೮.೬೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಪ್ರಜಾ ಸೌಧ ತಾಲ್ಲೂಕಾ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು. ೧ ವರ್ಷದಲ್ಲಿ ಕಟ್ಟಡ ಪೂರ್ಣಗೊಳ್ಳಲಿದ್ದು, ಇಲ್ಲಿಯೇ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಲಿವೆ ಇದರಿಂದ ಗ್ರಾಮೀಣ ಭಾಗದ ಜನರಿಗೆ…


