ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜಯಂತಿ ಆಚರಣೆ

ಶಹಾಪುರ: ಕನಕದಾಸರನ್ನು ನಾವು ಪೂಜ್ಯ ಸಂತ ಮತ್ತು ತತ್ವಜ್ಞಾನಿಯಾಗಿ ನೋಡುತ್ತೇವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ. ದಾಸಶ್ರೇಷ್ಠರೆಂದೇ ಕರೆಯಲಾಗುವ ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜನ್ಮ ದಿನವನ್ನು ನಾವು ಕನಕದಾಸ ಜಯಂತಿ ಎಂದು ಆಚರಿಸುತ್ತೇವೆ.ಎಂದು ಶಾಲೆಯ ಮುಖ್ಯ ಗುರುಗಳಾದ ಪೂರ್ಣಚಂದ್ರ ಕಟ್ಟಿಮನಿವರು ವಿದ್ಯಾರ್ಥಿಗಳಿಗೆ ಹೇಳಿದರು. ನಗರದ ಆದಿಲ್ ಪುರದಲ್ಲಿ ಇರುವ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಫಲಪುಷ್ಪ ಸಮರ್ಪಿಸಿ ಮಾಲಾರ್ಪಣೆ ಮಾಡುವವರೊಂದಿಗೆ ಜಯಂತಿ ನೆರವೇರಿಸಿ…

Read More

ಜವಾಬ್ದಾರಿಯುತ ವಕೀಲರಾಗಿ ಹೊರಹೊಮ್ಮಬೇಕು

ಕಲಬುರಗಿ: ಭಾರತೀಯ ಸಂವಿಧಾನ ಜೀವಂತ ಗ್ರಂಥವಾಗಿದ್ದು, ಪ್ರತಿಯೊಬ್ಬರಿಗೂ ಗೌರವದಿಂದ ಬದುಕುವ ಹಕ್ಕು ನೀಡಿದೆ. ಕಾನೂನು ವದವಿ ವಡೆದ ನಂತರ ವಿದ್ಯಾರ್ಥಿಗಳು ವೃತ್ತಿವರತೆ ಮೈಗೂಡಿಸಿಕೊಳ್ಳ ಬೇಕು. ಸಮಾಜ ನಿರೀಕ್ಷಿಸುವ ಜವಾಬ್ದಾರಿಯುತ ವಕೀಲರಾಗಿ ಹೊರಹೊಮ್ಮಬೇಕು ಎಂದು ಭಾರತೀಯ ಕಾನೂನು ಆಯೋಗದ ಅಧ್ಯಕ್ಷರು, ಸುಪ್ರೀಂ ಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹೇಳಿದರು. ನಗರದ ಲಾಹೋಟಿ ನಗರದ ಸೇರ್ ಶಂಕರಲಾಲ್ ಕಾನೂನು ಕಾಲೇಜಿಗೆ ೬೫ ವರ್ಷ ತುಂಬಿದ ಪ್ರಯುಕ್ತ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ‘ಜ್ಞಾನದ ಮುತ್ತುಗಳು’ ವಿಶೇಷ ಉಪನ್ಯಾಸ…

Read More

ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ

ಚಿತ್ತಾಪುರ; ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸರ್ಕಾರಿ ನೌಕರರ ಸಂಘದ…

Read More

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಜಿಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ…

Read More
error: Content is protected !!