ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ 8,500 ರೂ. ಹೆಚ್ಚುವರಿ ಪರಿಹಾರ : ಸಿದ್ದರಾಮಯ್ಯ
ರಾಜ್ಯದಾದ್ಯಂತ ಅತಿವೃಷ್ಠಿಯಿಂದ 10 ಲಕ್ಷ ಹೆಕ್ಟೇರಿಗೂ ಹೆಚ್ಚು ಬೆಳೆ ಹಾನಿ ಕಲಬುರಗಿ : ರಾಜ್ಯದಾದ್ಯಂತ ಪ್ರಸಕ್ತ ಸಾಲಿನ ಜೂನ್ ಮಾಹೆಯಿಂದ ಇಲ್ಲಿಯ ವರೆಗೆ ಅತಿವೃಷ್ಠಿ ಮತ್ತು ವ್ಯಾಪಕ ಮಳೆಯಿಂದ ಪ್ರಾಥಮಿಕ ವರದಿ ಪ್ರಕಾರ 10 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಎನ್.ಡಿ.ಆರ್.ಎಫ್. ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ…


