ಕಲಬುರಗಿ : ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಬೆಳ್ಳಿ ಮಹೋತ್ಸವ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಜಗದೀಶ ಚವ್ಹಾಣ್ ಅವರು ಪ್ರಕಟಣೆಯಲ್ಲಿ ತಿಳಿಸಿದರು.
ಚಿತ್ತಾಪುರ ಸ್ಟೇಷನ್ ತಾಂಡಾದ ದೊಡ್ಡ ಸೇವಾಲಾಲ್ ದೇವಸ್ಥಾನ ಹತ್ತಿರ 25ನೇ ವರ್ಷದ ನವರಾತ್ರಿ , ಬೆಳ್ಳಿ ಮಹೋತ್ಸವ ಅಂಗವಾಗಿ ಚಿತ್ತಾಪುರ ಸ್ಟೇಷನ್ ತಂಡಕ್ಕೆ ಸೆ 27 ರಂದು ಸಾಯಂಕಾಲ 7. 30 ಗಂಟೆಗೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿನ್ನರ್ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಹನುಮಂತ ಲಂಬಾಣಿ ಹಾಗೂ ಅವರು ತಂಡದ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.