ಗುರುಮಠಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿಕಾಂತ್ ರೆಡ್ಡಿ ಪಲ್ಲ ತಿಳಿಸಿದರು.
ತಾಲ್ಲೂಕಿನ ಪುಟಪಾಕ್ ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಸಹಯೋಗದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿಗಳ ಕಡೆ ಕಾರ್ಯಕ್ರಮದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಫಲಾನುಭವಿಗಳೊಂದಿಗೆ ಕುಂದು ಕೊರತೆ ನಿವಾರಣಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ರಾಜ್ಯ ಸರ್ಕಾರವು ಬಡ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲಿ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಪುಟಪಕ್ ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಪಂಚಾಯತಿ ಯಾದಗಿರಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಗುರುಮಠಕಲ್ ಸಹಯೋಗದಲ್ಲಿ ಏರ್ಪಡಿಸಿದ್ದ “ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿಗಳ ಕಡೆ ಕಾರ್ಯಕ್ರಮದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಫಲಾನುಭವಿಗಳೊಂದಿಗೆ ಕುಂದು ಕೊರತೆ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದಲ್ಲಿ ತಾ.ಪಂ.ಸಹಾಯಕ ನಿರ್ದೇಶಕರು ಶರಣಪ್ಪ ಮೈಲಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಮಲಿಂಗಮ್ಮ, ಪಂಚ ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರು ವೆಂಕಟರಾಮುಲು ಗೌಡ ಪುಟಪಕ್, ಸಂಜೀವ ಕುಮಾರ್ ಚಂದಾಪುರ್, ಲಕ್ಷ್ಮಿರೆಡ್ಡಿ ನಜರಾಪುರ್, ಚಾಂದ್ ಪಾಷಾ, ಜಾವಿದ್ ಚಿನ್ನಾಕರ್, ಪಿ ಡಿ ಓ ಅನುರಾದ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿಗಳು ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಇದ್ದರು.