ಮುತ್ತಗಿ ಗ್ರಾಮದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಆರೋಪಿಗಳಿಗೆ ಬಂಧಿಸಿ ಕಠಿಣ ಶಿಕ್ಷೆಗೆ ಆಗ್ರಹ: ಲಚ್ಚಪ್ಪ ಜಮಾದಾರ

ಜಗತ್ ವೃತ್ತದಿಂದ ಎಸ್ಪಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ

ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಅಗ್ರಹಿಸಿ ಎಸ್.ಪಿ ಕಛೇರಿ ಎದುರುಗಡೆ ಕೋಲಿ ಸಮಾಜ ಮುಖಂಡರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ. ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ
ಅವರು ಮಾತನಾಡಿ, ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಅ 9 ರಂದು ಗುರುವಾರ ತಡರಾತ್ರಿಯಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಗೆ ಅವಮಾನಗೊಳಿಸಿದ್ದು, ಇದು ನಮ್ಮ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ. ಕೋಲಿ, ಕಬ್ಬಲಿಗ ಸಮಾಜದ ಗುರುಗಳು ಹಾಗೂ ಬಸವಾದಿ ಶರಣರ ಸಮಕಾಲಿನ ಶರಣರಲ್ಲಿ, ನಿಜಶರಣ ಎಂದೇ ಖ್ಯಾತಿ ಪಡೆದಿರುವ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ಅವಮಾನಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿರುವ ಕಿಡಿಗೇಡಿಗಳನ್ನು ಈ ಕೂಡಲೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಇಲ್ಲದೆ ಹೋದಲ್ಲಿ ಮುಂಬರುವ ದಿನಗಳಲ್ಲಿ ಕಲಬುರಗಿ ಬಂದಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!