ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆಯ ಪಾತ್ರ ಬಹಳಷ್ಟು ಪ್ರಮುಖವಾದದ್ದು : ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್

ಕಲಬುರಗಿ : ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್ ಅವರು ಹೇಳಿದರು.

ಮಂಗಳವಾರದಂದು ಪೊಲೀಸ್ ಹುತಾತ್ಮರ ಸ್ಮಾರಕ ಡಿ.ಎ.ಆರ್ ಮೈದಾನದಲ್ಲಿ ಕಲಬುರಗಿ ನಗರ ಮತ್ತು ಕಲಬುರಗಿ ಜಿಲ್ಲಾ ಪೊಲೀಸ್ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣವನ್ನು ಸಮರ್ಪಿಸಿದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಮಾತನಾಡಿದರು.

ಪ್ರತಿಯೊಂದು ಸರ್ಕಾರದ ಕೆಲಸ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಸಮನ್ವಯತೆಯಿಂದ ಕೆಲಸ ಮಾಡುತ್ತೇವೆ ಚುನಾವಣೆಗಳು, ಜಾತ್ರೆಗಳು ಮತ್ತು ಅಗತ್ಯ ಸಂದರ್ಭಗಳಲ್ಲಿ ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದು ಅವರು ಹೇಳಿದರು.

ಪ್ರಕೃತಿ ವಿಕೋಪಗಳಾದ ಅತಿವೃಷ್ಠಿ ಮತ್ತು ಅನಾವೃಷ್ಠಿಯಂತಹ ಸಂದರ್ಭದಲ್ಲಿ ಪೋಲಿಸ್ ಇಲಾಖೆಯವರು ನೀಡುವ ಸಹಕಾರದಿಂದ ಯಾವುದೆ ಸಮಸ್ಯೆಗಳನ್ನು ಎದುರಿಸಲು ಪೋಲಿಸ್ ಇಲಾಖೆಯ ಸೇವೆ ಸಹಕಾರಿಯಾಗಿದೆ ಎಂದರು.

ನಿವೃತ್ತ ಪೊಲೀಸ್ ಅಧಿಕಾರಿಗಳು ತಮ್ಮ ಅಸೋಸಿಯೇಷನ್ ಮೂಲಕ ಬಹಳಷ್ಟು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮುಖಾಂತರ ಸಾಮಾಜಿಕ ಸೇವೆಯನ್ನು ಸಲ್ಲಿಸುವ ಮುಖಾಂತರ ಕರ್ತವ್ಯದಲ್ಲಿ ಸೇವೆಯನ್ನು ಸಲ್ಲಿಸುತಿರುವ ಸಂದರ್ಭದಲ್ಲಿ ಹುತಾತ್ಮರ ಪೊಲೀಸ್ ಸಿಬ್ಬಂದಿಗಳಿಗೆ ಗೌರವವನ್ನು ಸಲ್ಲಿಸೋಣ ಎಂದು ತಿಳಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಪ್ರತಿವರ್ಷ ಅಕ್ಟೋಬರ್ 21 ಪೋಲಿಸ್ ಹುತಾತ್ಮರ ದಿನ ಈ ದಿನ ನಮ್ಮ ಇಲಾಖೆಗೆ ಒಂದು ಕಡೆ ದು:ಖದ ದಿನವಾದರೆ ಜೊತೆಗೆ ಹಮ್ಮೆಯ ದಿನವು ಆಗಿದೆ ಎಂದರು.
1959 ಅಕ್ಟೋಬರ್ 21 ರಂದು ಭಾರತ ದೇಶದ ಉತ್ತರ ಗಡಿಯ ಲಡಾಕ್‍ನಲ್ಲಿ 10 ಜನ ವೀರ ಭಾರತಿಯ ಪೊಲೀಸರು ತಮಗಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಮತ್ತು ಆಧುನಿಕ ಶಾಸ್ತ್ರಾಸ್ತ್ರಗಳನ್ನು ಹೊಂದಿದ್ದ. ಚೀನಾ ದೇಶದ ಸೈನಿಕರೊಂದಿಗೆ ತಮ್ಮ ಪ್ರಾಣವನ್ನು ಪಣವಾಗಿಟ್ಟು ಹೋರಾಡಿ ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ್ದಾರೆ. 2024 – 2025 ನೇ ಸಾಲಿನಲ್ಲಿ ವಿವಿಧ ರಾಜ್ಯ ಮತ್ತು ಕೇಂದ್ರಿಯ ಪೋಲಿಸ್ ಪಡೆಗಳಲ್ಲಿ ಹುತಾತ್ಮರಾದ 191 ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರನ್ನು ಸ್ಮರಿಸುವ ಭಾಗ್ಯ ನನ್ನದಾಗಿದೆ ಎಂದು ಅವರು ಹೇಳಿದರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಅಧ್ಯಕ್ಷತೆ ವಹಿಸಿದ್ದರು.
ಕರ್ತವ್ಯ ನಿರತ ಪೋಲಿಸ್ ಅಧಿಕಾರಿಗಳಿಗೆ ಗೌರವ ಸಲ್ಲಿಸಲು ಪೋಲಿಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ, ಕವಾಯತು ತಂಡದಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡುಗಳನ್ನು ಹಾರಿಸಿ ಪೊಲೀಸ್ ಬ್ಯಾಂಡನಿಂದ ರಾಷ್ಟ್ರಗೀತೆಯನ್ನು ನೆರವೇರಿಸಿ ಗೌರವ ಸಲ್ಲಿಸಲಾಯಿತು.
ಪೊಲೀಸ್ ಹುತಾತ್ಮರ ದಿನಾಚರಣೆ ಪ್ರಯುಕ್ತ ಎರಡು ನಿಮಿಷಗಳವರೆಗೆ ಮೌನ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಮಾನ್ಯ ಪೋಲಿಸ್ ಆಯುಕ್ತರಾದ ಶರಣಪ್ಪ ಎಸ್.ಡಿ., ಕಲಬುರಗಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೋಲಿಸ್ ಆಯುಕ್ತರಾದ ಕನಿಕಾ ಸಿಕ್ರಿವಾಲ್ ಉಪಸ್ಥಿತರಿದ್ದರು. ಹೆಚ್ಚುವರಿ ಪೋಲಿಸ್ ವರಿಷ್ಠಾದಿಕಾರಿ ಮಹೇಶ ಮೇಘಣ್ಣನವರ್ ಸೇರಿದಂತೆ ಪೋಲಿಸ ಅಧಿಕಾರಿಗಳು, ವಯೋನಿವೃತಿ ಹೊಂದಿದ ಪೊಲೀಸ್ ಅಧಿಕಾರಿಗಳು, ಗಣ್ಯ ವ್ಯಕ್ತಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!