ಕಲಬುರಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕಲ್ಬುರ್ಗಿ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ರಾಯಪ್ಪ ಹುಣಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳ ಸಮನ್ವಯ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿತ್ತು.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಮಾರ್ಗದರ್ಶನ ಹಾಗೂ ತಂಬಾಕು ಮುಕ್ತ ಯುವ ಅಭಿಯಾನದ ಕುರಿತು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಎಲ್ಲಾ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಅಲ್ಲದೆ ಕಲ್ಬುರ್ಗಿ ಜಿಲ್ಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಅಡಿಯಲ್ಲಿ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ನಿರ್ಮಿಸಲು ಎಲ್ಲಾ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು
ಹಾಗೂ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜು ಮತ್ತು ಮಹಾವಿದ್ಯಾಲಯಗಳು ತಂಬಾಕು ಮುಕ್ತ ಶಾಲೆಯಂದು ಘೋಷಿಸಬೇಕು ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಮತ್ತು ಜಿಲ್ಲಾ ಹಂತದಲ್ಲಿ COTPA ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಲು ತಾಲೂಕ ಹಂತದ ಅಧಿಕಾರಿಗಳು ನಿರಂತರವಾಗಿ COTPA-2003 ದಾಳಿಗಳನ್ನು ಕೈಗೊಳ್ಳಲು ಸೂಚಿಸಿದರು.
ಆರೋಗ್ಯ ಇಲಾಖೆಯಿಂದ ಪೌರಕಾರ್ಮಿಕರು ಮಹಾನಗರ ಪಾಲಿಕೆ ಮತ್ತು ಜೆಸ್ಕಾಂ ಸಿಬ್ಬಂದಿ ವರ್ಗದವರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಕೈಗೊಳ್ಳಲು ಸೂಚಿಸಿದರು.
ಈಗಾಗಲೇ ತಂಬಾಕು ಮುಕ್ತ ಯುವ ಅಭಿಯಾನವು 9 ಅಕ್ಟೋಬರ್ 2025 ರಂದು ರಾಷ್ಟ್ರಮಟ್ಟದಲ್ಲಿ ಚಾಲನೆಯಾಗಿದ್ದು ಇದು ಡಿಸೆಂಬರ್ 9 ರವರೆಗೆ ಒಟ್ಟು 60 ದಿನಗಳ ಕಾರ್ಯಕ್ರಮವಾಗಿದ್ದು ಆರೋಗ್ಯ ಇಲಾಖೆಯಿಂದ ಈಗಾಗಲೇ ಜಾಗೃತಿ ಕಾರ್ಯಕ್ರಮಗಳು ಶಾಲಾ ಅರವಿನ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಸಭೆಯ ವಿಷಯ ಸೂಚಿ ಅನ್ವಯ ಜಿಲ್ಲಾ ತಂಬಾಕು ನಿಯಂತ್ರಣಕೋಶದ ಜಿಲ್ಲಾ ಸಲೆಗಾರರಾದ ಶ್ರೀಮತಿ ಸುಜಾತಾ ಪಾಟೀಲ್ ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ರೀ ಲಕ್ಷ್ಮಣ ಶೃಂಗೇರಿ, ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾಕ್ಟರ್ ರಾಕೇಶ್ ಕಾಂಬಳೆ, ಎಲ್ಲ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಎಲ್ಲಾ ತಾಲೂಕ ಆರೋಗ್ಯ ಅಧಿಕಾರಿಗಳು, ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಮಹಾನಗರ ಪಾಲಿಕೆ, ಮುಖ್ಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಂಡ ಮತ್ತು ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


