ವಡಗೇರಾ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜಗೆ:ಮಲ್ಲಿಕಾರ್ಜುನ ಅಭಿನಂದನೆ

ವಡಗೇರಾ:ಪಟ್ಟಣದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ವಡಗೇರಾ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಯ ಘೋಷಣೆಯನ್ನು ಕನ್ನಡ ಸಾಹಿತ್ಯ ಪರಿಷತ್ ವಡಗೇರಾ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಾಲೂಕು ಕೇಂದ್ರವಾಗಿ ಸುಮಾರು ವರ್ಷಗಳೇ ಕಳೆದರೂ ಪಟ್ಟಣ ಪಂಚಾಯಿತಿಯಾಗಿ ಘೋಷಣೆಯಾಗಿರಲಿಲ್ಲ ವಿವಿಧ ಸಂಘಟನೆಗಳು ಸಾರ್ವಜನಿಕರ ವತಿಯಿಂದ ಪಟ್ಟಣ ಪಂಚಾಯಿತಿ ಮಾಡುವಂತೆ ಒತ್ತಾಯಿಸಿ ಹಲವು ಹೋರಾಟ ಮನವಿಗಳು ಸಲ್ಲಿಸಲಾಗಿತ್ತು. ಕೊನೆಗೂ ಹಲವು ವರ್ಷಗಳ ಕನಸು ನನಸಾಗಿದೆ ಪಟ್ಟಣ ಪಂಚಾಯಿತಿಯಿಂದಾಗಿ ಪಟ್ಟಣದ ಅಭಿವೃದ್ಧಿಗೆ ತುಂಬಾ ಅನುಕೂಲವಾಗಲಿದೆ ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಶಾಸಕರು ಹೆಚ್ಚಿನ ಅನುದಾನ ಒದಗಿಸಿ ಅಭಿವೃದ್ಧಿಗೆ ಶ್ರಮಿಸುವಂತೆ ಕೋರಿದರು. ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸುವಲ್ಲಿ ಶ್ರಮಿಸಿದ ಸಂಬಂಧಿಸಿದ ಸಂಪುಟ ಸಚಿವರಿಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಶೇಷವಾಗಿ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ರವರಿಗೂ ಸರಕಾರಕ್ಕೂ ಜಿಲ್ಲಾಡಳಿತಕ್ಕೆ ವಡಗೇರಾ ತಾಲೂಕು ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ ಅಭಿನಂದನೆ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!