ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕ್ಕೆ ಆಗದಂತೆ ಕ್ರಮವಹಿಸಬೇಕು | ಪ್ರಭಾಕರ್ ಹದನೂರ

ಸರ್ಕಾರ ಒಳ ಮೀಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ

ಕಲಬುರಗಿ :
ಪ್ರಸ್ತುತ ನಡೆಯುತ್ತಿರುವ ಬೆಳಗಾವಿ ಅಧಿವೇಶನದಲ್ಲಿಯೆ ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಸಂಪೂರ್ಣ ಒಳ ಮೀಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಿ, ಹಾಗೂ ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕ್ಕೆ ಆಗದಂತೆ ಕ್ರಮವಹಿಸಬೇಕೆಂದು, ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಪ್ರಭಾಕರ ಹದನೂರ ಅವರು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿಯಲ್ಲಿ ಅವರು ಮಾತನಾಡಿ, ಮಾದಿಗ ದಂಡೋರಾ ಹೋರಾಟ ಸಮಿತಿಯು ಸಂವಿಧಾನ ಬದ್ಧ ಮಿಸಲಾತಿಯಲ್ಲಿ ಮಾದಿಗರಾದ ಅನ್ಯಾಯವನ್ನು ಮನಗಂಡು ಈ ರಾಜ್ಯದಲ್ಲಿ ಪ್ರ-ಪ್ರಥಮ ಬಾರಿಗೆ ಮಾದಿಗ  ಹೆಸರಿನಲ್ಲಿ ಸಂಘಟನೆಯನ್ನು ಸ್ಥಾಪಿಸಿ 1997 ರಲ್ಲಿ ರಾಜ್ಯ ಸಂಸ್ಥಾಪಕ ಅಧ್ಯಕ್ಷರಾದ ಮಾಪಣ್ಣ ಹದನೂರವರ ನೇತೃತ್ವದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ, ರಾಜ್ಯಾದಾದ್ಯಂತ ಹೋರಾಟ ಮಾಡುತ್ತಾ ಬಂದಿದ್ದು, ಮಾನ್ಯ ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ನೀಡಿದ ತೀರ್ಪಿನಂತೆ ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ ಅಧ್ಯಕ್ಷತೆಯ ಏಕಸದಸ್ಯ ಆಯೋಗವು ಪರಿಶಿಷ್ಟ ಜಾತಿಗಳ ಉಪಜಾತಿಗಳನ್ನು 5 ಗುಂಪುಗಳನ್ನಾಗಿ ಮಾಡಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಈಗ ಆಗಸ್ಟ್-19-2025 ರಂದು ವಿಶೇಷ ಕ್ಯಾಬಿನೇಟ್ ಸಭೆಯಲ್ಲಿ 3 ಗುಂಪುಗಳನ್ನಾಗಿ ವಿಂಗಡಿಸಿ ಸರಕಾರವು ಜಾರಿಗೆ ಒಪ್ಪಿಗೆ ನೀಡಿದ್ದು, ಈಗ ಒಳಮಿಸಲಾತಿಯಲ್ಲಿರುವ ಲೋಪದೋಷಗಳನ್ನು ಕೂಡಲೇ ಸರಿಪಡಿಸಿ ಪ್ರಸ್ತುತ ನಡೆಯುತ್ತಿರುವ ಬೆಳಗಾವಿಯ ಅಧಿವೇಶನದಲ್ಲಿಯೇ ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಸಂಪೂರ್ಣ ಒಳ ಮಿಸಲಾತಿ ವರ್ಗೀಕರಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ, ಸಾಂಕೇತಿಕ ಧರಣಿ ಮೂಲಕ ಮಾದಿಗ ದಂಡೋರಾ ಸಮಿತಿಯು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!