ದೇಶಾಭಿಮಾನ ಮೂಡಿಸುವ ನಿರ್ಣಯಗಳು ಇತಿಹಾಸದಲ್ಲಿ ದಾಖಲಾಗಲಿವೆ : ಲಲಿತಾ ಅನಪುರ
ಗುರುಮಠಕಲ್: ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಭಾರತದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗೊಂಡ ನಿರ್ಣಯಗಳು ಇತಿಹಾಸದಲ್ಲಿ ದಾಖಲೆಯಾಗಲಿವೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪುರ ಹೇಳಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬುಜೀ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಹರ್ ಘರ್ ತಿರಂಗಾ ಯಾತ್ರೆಯ ಅಂಗವಾಗಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದ್ದು, ದೇಶಾಭಿಮಾನವನ್ನು ಬೆಳೆಸುವುದು ನಮ್ಮ ಪಕ್ಷದ ಶಾಶ್ವತ ಉದ್ದೇಶ ಎಂದರು.
ಬಿಜೆಪಿ ವತಿಯಿಂದ ಆ.13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ಈ ಸಂದರ್ಭದಲ್ಲಿ ಬೈಕ್ ರ್ಯಾಲಿ, ಪ್ರತಿಯೊಂದು ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವುದು, ಪ್ರತಿಯೊಬ್ಬರೂ ರಾಷ್ಟ್ರಧ್ವಜಕ್ಕೆ ಗೌರವ ತೋರಬೇಕು, ಎಂದು ತಿಳಿಸಿದರು.
ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.
ಬೈಕ್ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


