79 ನೇ ಸ್ವಾತಂತ್ರ್ಯೋತ್ಸವ : ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹ

ಕಲಬುರಗಿ : 79ನೇ ಸ್ವಾತಂತ್ರ್ಯೋತ್ಸ ಅಂಗವಾಗಿ ಜಿಲ್ಲಾಡಳಿತದಿಂದ ಕಲಬುರಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವರು ತೆರೆದ ವಾಹನದಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.

ಪೊಲೀಸ್,  ಗೃಹ ರಕ್ಷಕ ದಳದವರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಪರೇಡ್ ನಡೆಸಿದರು. ಶಾಸಕ ಅಲಂಪ್ರಭು ಪಾಟೀಲ, ಶಾಸಕಿ ಕನೀಜ್ ಫಾತೀಮಾ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ,ತಿಪ್ಪಣ್ಣಪ್ಪ ಕಮಕನೂರ, ಮಹಾಪೌರರು ವರ್ಷ ರಾಜೀವ ಜಾನೆ, ಜಿಲ್ಲಾಧಿಕಾರಿ, ನಗರ ಪೊಲೀಸ ಅಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಇತರರು ಜಿಲ್ಲೆಯ ಶಾಸಕರು ಹಾಗೂ ಗಣ್ಯರು ಮತ್ತು ಪ್ರಮುಖರು ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ ಅವರು ಲಿಂಗೈಕ್ಯಯಾದ ಹಿನ್ನಲೆ ೨ ನಿಮಿಷಗಳ ಕಾಲ ಮೌನಚರಣೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!