ವಿದ್ಯಾರ್ಥಿಯರ ಪ್ರತಿಭೆ ಪ್ರೋತ್ಸಾಹಿಸಲು ಗೋಡೆ ಪತ್ರಿಕೆ ಸಹಕಾರಿ: ಡಾ. ಸತ್ಯಂಪೇಟೆ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ರಾಜ್ಯ ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಾ. ಶಿವರಂಜನ ಸತ್ಯಂಪೇಟೆ ನುಡಿದರು.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದವರು ಸಂಚಾಲಿತ “ಮುಕ್ತ ಮನಸು” ಗೋಡೆ ಪತ್ರಿಕೆ ಬಿಡುಗಡೆ ಗೊಳಿಸಿ ಮಾತನಾಡಿದರು. ಕನ್ನಡ ವಿಭಾಗದವರು ಈ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಈ ತರಹದ ಪ್ರಯೋಗ ಮಾಡುತ್ತಿರುವುದು ಶ್ಲಾಘಿಸಿದರು.

ನಮ್ಮ ಕಾಲೇಜಿನಲ್ಲಿ ಈ ರೀತಿಯ ಪ್ರಯೋಗ ಮೊದಲು ಹಿಂದಿ ವಿಭಾಗದ ವತಿಯಿಂದ ಆರಂಭಿಸಲಾಯಿತು. ಅವರಿಂದ ಪ್ರೋತ್ಸಾಹ ಪಡೆದು ಕನ್ನಡ ವಿಭಾಗದವರು ಮುಕ್ತ ಮನಸು ಗೋಡೆ ಪತ್ರಿಕೆ ಆರಂಭಿಸಿರುವುದು ವಿದ್ಯಾರ್ಥಿಗಳ ಸರ್ವೋತಮುಖ ಬೆಳವಣಿಗೆಗೆ ಸಹಕಾರಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ನುಡಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಕವಿತಾ ಅಶೋಕ ಅವರು ಅತಿಥಿಗಳಿಗೆ ಸ್ವಾಗತ ಮಾಡಿದರು. ಬಸಮ್ಮ ಗೊಬ್ಬರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ದಾನಮ್ಮ ಕೋರವಾರ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಪ್ರೊ ವೀಣಾ ಎಚ್. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ ಚವ್ಹಾಣ, ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ ಮಹೇಶ ಗಂವ್ಹಾರ, ಆಯಿಕ್ಯೂಎಸಿ ಸಂಯೋಜಕರಾದ ಡಾ. ಶಿವರಾಜ ಜಿ., ಡಾ. ಜ್ಯೋತಿಪ್ರಕಾಶ ದೇಶಮುಖ, ಡಾ. ಸವಿತಾ, ಶಿವಲೀಲಾ ಧೋತ್ರ. ಡಾ. ಮೋಹಸೀನಾ, ಸುಷ್ಮಾ ಕುಲಕರ್ಣಿ, ಡಾ. ರಾಜೇಶ, ಗೀತಾ ಪಾಟೀಲ, ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!