ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸೆ. 9 -10 ರಂದು ಕಲಬುರಗಿಗೆ ಭೇಟಿ

ಸೆ.9 ರಿಂದ ಜೆಡಿಎಸ್ ರಾಜ್ಯ ಪ್ರವಾಸ

ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ ಕುಮಾರ ಸ್ವಾಮಿ ರವರು ಸೆ.9 ಹಾಗೂ 10 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ,ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ರವರು ಈಗಾಗಲೇ ತಂಡವನ್ನು ರಚಿಸಿದ್ದಾರೆ. ಈ ತಂಡವು ಸೆ.9 ಮತ್ತು 10 ಕಲಬುರಗಿ ಜಿಲ್ಲೆಗೆ ಭೇಟಿ ನೀಡಲಿದೆ. ರಾಜ್ಯದ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಗೆ ಮತ್ತು ಪ್ರವಾಹಕ್ಕೆ ತುತ್ತಾದ ಪ್ರದೇಶಗಳಲ್ಲಿ ಆಸ್ತಿ-ಪಾಸ್ತಿಗಳಿಗೆ ಉಂಟಾಗಿರುವ ಹಾನಿಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದಿಂದ ಸಮೀಕ್ಷೆ ನಡೆಸಲು ಪಕ್ಷದ ಶಾಸಕರು, ಮಾಜಿ ಶಾಸಕರು ಮತ್ತು ಜಿಲ್ಲಾಧ್ಯಕ್ಷರುಗಳನ್ನು ಒಳಗೊಂಡ ತಂಡ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ವೀಕ್ಷಿಸಲಿದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಮ್ಮ ಪಕ್ಷದ ನಾಯಕರು ನೀಡಲಿದ್ದಾರೆ. ಈ ತಿಂಗಳಿಂದ ಮುಂಗಾರು ಹೆಚ್ಚಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆ ಹಾನಿಯಾಗಿದೆ ಎಂದು ಹೇಳಿದರು.

ತೊಗರಿ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿದೆ. ಸರ್ಕಾರ, ಸಚಿವರು ತುರ್ತು ಪರಿಹಾರ ನೀಡಿಲ್ಲ. ಆಯಾ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಕೃಷಿ ಸಚಿವರು ಇದ್ದಾರೋ, ಇಲ್ಲವೋ ಅನ್ನೋ ಪ್ರಶ್ನೆ ಉದ್ಭವವಾಗಿದೆ ಎಂದು ವಾಗ್ದಾಳಿ ನಡೆಸಿದರು.

ನಿಖಿಲ ಕುಮಾರ್ ಸ್ವಾಮಿ ಪ್ರವಾಸ ಸೆ. 9 ರಂದು ಕಮಲಾಪುರದ ಬಳಿ ಹಾನಿಗೊಳಗಾದ ಮನೆಗಳು ಹಾಗೂ ಬೆಳೆ ಹಾನಿ ವೀಕ್ಷಣೆ ಮತ್ತು ನೊಂದ ಸಂತ್ರಸ್ತರ ಭೇಟಿ ಹಾಗೂ ಸಾಂತ್ವನ ಹೇಳುತ್ತಾರೆ. ಸೆ.10 ರಂದು ಬೆಳಿಗ್ಗೆ 10 ರಿಂದ 11 ಗಂಟೆ ಮಧ್ಯೆ ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಕೃಷಿ ಬೆಳೆಗಳಾದ ತೊಗರಿ ಮತ್ತು ಇತರ ಫಸಲುಗಳಿಗೆ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ಕಲಬುರಗಿ ಎಪಿಎಂಸಿ ಯಾರ್ಡ್ ನಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ

ನಂತರ ಭೀಮಾನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಮಾಡಿ. ನೊಂದ ಸಂತ್ರಸ್ಥರ ಭೇಟಿ ಮತ್ತು ರೈತರೊಂದಿಗೆ ಸಂವಾದ ಹಾಗೂ ಸರ್ಕಾರ ಕೈಗೊಂಡಿರುವ ನೆರೆ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ನಂತರ ಜೇವರ್ಗಿಯಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮತ್ತು ನೊಂದ ಸಂತ್ರಸ್ತರ ಭೇಟಿ ನೀಡಲಿದ್ದಾರೆ, ಎಂದು ತಿಳಿಸಿದ್ದರು.

ನೀಖಿಲಕುಮಾರ ಸ್ವಾಮಿ ಅವರೊಂದಿಗೆ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಖಾಶೆಂಪೂರ್, ಗುರುಮಿಠಕಲ್ ಶಾಸಕರಾದ ಶರಣಗೌಡ ಕಂದಕೂರು, ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ. ನೇಮಿರಾಜ್ ನಾಯ್ಕ. ದೇವದುರ್ಗ ಶಾಸಕರಾದ ಶ್ರೀಮತಿ ಕರೆಮ್ಯ ಜಿ.ನಾಯ್ಕ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಸೇರಿದಂತೆ ಮಾಜಿ ಶಾಸಕರು, ಪಕ್ಷದ ಮುಖ್ಯಸ್ಥ ತಂಡದಲ್ಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!