ಸುರಪುರ: ಮುಂಬರುವ ಸೆಪ್ಟೆಂಬರ್ 22 ರಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಬಂಧುಗಳು ಸಮೀಕ್ಷೆಯ ನಮೂನೆ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಯಿಸಬೇಕು ಮತ್ತು ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಹಾಗೂ ಉಪ ಜಾತಿಯ ಕಾಲಮ್‍ನಲ್ಲಿ ತಮ್ಮ ಇರುವ ಉಪ ಜಾತಿಯ ಹೆಸರನ್ನು ಬರೆಯಿಸುವಂತೆ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ ಅಮ್ಮಾಪುರ ಮನವಿ ಮಾಡಿದ್ದಾರೆ.
ಸಮೀಕ್ಷೆಯ ಸಂದರ್ಭದಲ್ಲಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯಿತರು ಒಂದೇ ತೆರನಾದ ಧರ್ಮ ಜಾತಿ ಹೆಸರುಗಳನ್ನು ಸೂಚಿಸಿದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿರುವ ನಮ್ಮ ಸಮುದಾಯದ ಜನಸಂಖ್ಯೆಯ ಪ್ರಮಾಣ ನಿಖರವಾಗಿ ತಿಳಿಯಲಿದ್ದು ಆ ಮೂಲಕ ಸಮಾಜದ ಅಭಿವೃದ್ಧಿಗೆ ಹೋರಾಟ ಮಾಡಲು ಹಾಗೂ ಸರಕಾರಕ್ಕೆ ಒತ್ತಾಯಿಸಲು ಅನುಕೂಲವಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಬಂಧುಗಳಿಗೆ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯು ವಿನಂತಿಸುತ್ತದೆ ಎಂದು ಅವರು ತಿಳಿಸಿದ್ದಾರೆ.