ಕಲಬುರಗಿ: ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಕುರನೂರ ಡ್ಯಾಮನಿಂದ ಗುರುವಾರ ರಾತ್ರಿ ನೀರು ಹರಿಬಿಟ್ಟಿದ್ದರಿಂದ ಅಫಜಲಪುರ ತಾಲೂಕಿನ ನಂದರಗಿ ತೆಲ್ಲೂಣಗಿ ಜೇವರ್ಗಿ ಬಿ ಜೇವರ್ಗಿ ಕೆ ಗೌರ ಬಂಕಲಗಾ ದಿಕ್ಸಂಗಾ ಈ ಎಲ್ಲಾ ಗ್ರಾಮಗಳು ಪ್ರವಾಹದ ಆತಂಕದಲ್ಲಿದ್ದು ನಂದರಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೇವರ್ಗಿ ಬಿ, ಗ್ರಾಮಕ್ಕೆ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಂರ ಸಿಂಗ್ ಮೀನಾ ಅವರು ಭೇಟಿ ನೀಡಿದರು. ಬೋರಿ ಹಳ್ಳ ನೀರಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈಯ೯ ತುಂಬಿದರು. ಅಧಿಕಾರಿಗಳು ನಿಮ್ಮ ಜೊತೆ ಇದ್ದೇವೆ ನೀವು ಭಯಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ದಿಕ್ಸಂಗ ಕೆ ಗ್ರಾಮದ ಪ್ರವಾಹದಿಂದ ಕಷ್ಟದಲ್ಲಿರುವ ಕುಟುಂಬಗಳಿಗೆ ಗ್ರಾಮ ಪಂಚಾಯತಿ ವತಿಯಿಂದ ಆಹಾರ ವ್ಯವಸ್ಥೆ ಮಾಡಲಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ , ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಸಹಾಯಕ ನಿರ್ದೇಶಕ ರಮೇಶ್ ಪಾಟಿಲ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.