ನಮ್ಮ ಸರ್ಕಾರ ರೈತರ ಪರವಾಗಿದೆ ಆತಂಕ ಬೇಡ: ಡಾ.ಭೀಮಣ್ಣ ಮೇಟಿ
ವಡಗೇರಾ: ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು ಮುಖ್ಯಮಂತ್ರಿಗಳು ಈಗಾಗಲೇ ರೈತರಿಗೆ ಸಮರ್ಪಕ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ರೈತರಲ್ಲಿ ಆತಂಕ ಬೇಡ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೆಟಿ ಹೇಳಿದರು. ಯಾದಗಿರಿ ಮತಕ್ಷೇತ್ರದ ವಡಗೇರಾ ,ಕಂದಳ್ಳಿ, ಬೂದಿನಾಳ,ಕೋನಳ್ಳಿ, ಹಾಗೂ ಇನ್ನಿತರ ಗ್ರಾಮಗಳಲ್ಲಿ ಭೀಮಾ ನದಿ ಪ್ರವಾಹ ಮತ್ತು ಮಳೆಯಿಂದ ಹಾನಿಗೊಳಗಾದ ಜಮೀನುಗಳ ಬೆಳೆ ವೀಕ್ಷಣೆ ಮಾಡಿ ಅವರು ಮಾತನಾಡಿದರು.ಬೆಳೆ ಹಾನಿ ಪ್ರದೇಶಗಳಲ್ಲಿ ಈಗಾಗಲೇ ಸರಕಾರದ ಆದೇಶದಂತೆ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ.ರೈತರು…


