ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸುಮಾರು 2,500 ಆಹಾರ ಸಾಮಗ್ರಿಗಳ ವಿತರಣೆ- ಸಂಸದ ರಾಧಾಕೃಷ್ಣ ದೊಡ್ಡಮನಿ.
ಕಲಬುರಗಿ ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ನಾಳೆ ( ಶುಕ್ರವಾರ) ಜಿಲ್ಲಾಡಳಿತ ಮೂಲಕ ನೀಡಲಾಗುವುದು ಎಂದು ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತೀವೃಷ್ಠಿ ಹಾಗೂ ಪ್ರವಾಹ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ವೈಯಕ್ತಿಕವಾಗಿ ಸುಮಾರು 2,500 ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ಜಿಲ್ಲಾಡಳಿತದ ಮೂಲಕ ನೀಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ…


