ಮೋದಿ 75ನೇ ಜನ್ಮದಿನ: ಚಿತ್ತಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಚಿತ್ತಾಪುರ ಮಂಡಳಿಯು ವಿಶಿಷ್ಟವಾದ ‘ಸೇವಾ ಪಾಕ್ಷಿಕ’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 17 ರಿಂದ ಮಹಾತ್ಮ ಗಾಂಧೀಜಿ ಅವರ ಜನ್ಮದಿನವಾದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಭಾಗವಾಗಿ, ಪಟ್ಟಣದ ಬಸ್ ನಿಲ್ದಾಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ ಅಭಿಯಾನವು ಕೇವಲ ಪರಿಸರವನ್ನು…


