ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆಯ ಪಾತ್ರ ಬಹಳಷ್ಟು ಪ್ರಮುಖವಾದದ್ದು : ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್
ಕಲಬುರಗಿ : ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್ ಅವರು ಹೇಳಿದರು. ಮಂಗಳವಾರದಂದು ಪೊಲೀಸ್ ಹುತಾತ್ಮರ ಸ್ಮಾರಕ ಡಿ.ಎ.ಆರ್ ಮೈದಾನದಲ್ಲಿ ಕಲಬುರಗಿ ನಗರ ಮತ್ತು ಕಲಬುರಗಿ ಜಿಲ್ಲಾ ಪೊಲೀಸ್ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣವನ್ನು ಸಮರ್ಪಿಸಿದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಮಾತನಾಡಿದರು. ಪ್ರತಿಯೊಂದು ಸರ್ಕಾರದ ಕೆಲಸ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಸಮನ್ವಯತೆಯಿಂದ ಕೆಲಸ ಮಾಡುತ್ತೇವೆ…


