ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ಕ್ಕೆ ಮಿಂಚಿನ ನೋಂದಣಿ ಅಭಿಯಾನ -ಜಹೀರಾ ನಸೀಮ್
ಕಲಬುರಗಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಭಾಗವಾಗಿ ಇದೇ ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ಕ್ಕೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆ ವರೆಗೆ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದ್ದಾರೆ.01.11.2025 ಅರ್ಹತಾ ದಿನಾಂಕಕ್ಕೆ ಅನ್ವಯಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದ್ದು,…


