ಪ್ರಜಾ ಸೌಧ, ಉತ್ಸವ ದಿನಾಚರಣೆ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ-ನಲಿನ್ ಅತುಲ್
ಕಲ್ಯಾಣ ಕರ್ನಾಟಕ ಉತ್ಸವ ಪೂರ್ವಭಾವಿ ಸಭೆ: ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮತ್ತು ಪ್ರಜಾ ಸೌಧ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸೆ.16 ಮತ್ತು 17 ರಂದು ಎರಡು ದಿನಗಳ ಕಾಲ ಕಲಬುರಗಿಗೆ ಆಗಮಿಸಲಿದ್ದು, ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಕೆ.ಕೆ.ಆರ್.ಡಿ.ಬಿ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್ ಹೇಳಿದರು. ಮಂಗಳವಾರ ಇಲ್ಲಿನ ಕೆ.ಕೆ.ಆರ್.ಡಿ.ಬಿ. ಸಭಾಂಗಣದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ.16 ರಂದು ಯಡ್ರಾಮಿಯಲ್ಲಿ ನಡೆಯುವ…


