ವಡಗೇರಾ ಡಿಡಿಯು ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
ವಡಗೇರಾ:ಹೈದರಾಬಾದ್ ಕರ್ನಾಟಕ ವಿಮೋಚನೆಯಾಗಲು ಸರ್ದಾರ್ ವಲ್ಲಭಾಯಿ ಪಟೇಲ್ ಸೇರಿದಂತೆ ಈ ಭಾಗದ ಅನೇಕ ಹಿರಿಯ ಹೋರಾಟಗಾರರ ಫಲವಾಗಿ ನಮಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ ಎಂದು ಡಿಡಿಯು ಸಿಬಿಎಸ್ಇ ಶಾಲೆಯ ಪ್ರಾಂಶುಪಾಲ ಸಜೀಶ್ ರಾಜ್ ಹೇಳಿದರು. ಪಟ್ಟಣದ ಡಿಡಿಯು ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಭಾಗದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾದದ್ದು ,ದೇಶದ ಅಭಿವೃದ್ಧಿಯಲ್ಲಿ…


