ಫೇ.೧ ರಂದು ರಾಜ್ಯಮಟ್ಟದ ಪ್ರತಿಭಾಪುರಸ್ಕಾರ ಕಾರ್ಯಕ್ರಮ
ತಾಳಿಕೋಟೆ, ಪಟ್ಟಣದ ಶ್ರೀ ಖಾಸ್ಗತೇಶ್ವರ ಸಭಾ ಭವನದಲ್ಲಿ ಬರಲಿರುವ ಫೇ.೧ ರಂದು ಅಖೀಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಸಮಾಜ ರಾಜ್ಯ ಘಟಕ ಅಲ್ಲದೇ ತಾಲೂಕಾ ಘಟಕದ ನೇತೃತ್ವದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖೀಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಸಮಾಜದ ರಾಜ್ಯಾಧ್ಯಕ್ಷ ಎಸ್.ಎಸ್.ಪಾಟೀಲ ಅವರು ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಹಂಡೆ ವಜೀರ ಸಮಾಜದ ಜನರು ವಿಜಯಪುರ, ಕೊಪ್ಪಳ, ಬೀದರ ಅಲ್ಲದೇ ರಾಜ್ಯದ ಇನ್ನೂ ಅನೇಕ…


