ದೈಹಿಕ ದೋಷವುಳ್ಳ ಮಕ್ಕಳಿಗೆ ಚಿಕಿತ್ಸೆ ನೀಡುವ ಉದ್ದೇಶ- ಬಿಇಓ ಯಲ್ಲಪ್ಪ
ಸುರಪುರ: ವಿವಿಧ ಬಗೆಯ ದೈಹಿಕ ಹಾಗೂ ಮಾನಸಿಕ ದೋಷಗಳನ್ನು ಹೊಂದಿದ ಮಕ್ಕಳನ್ನು ಗುರುತಿಸಿ ರಾಜ್ಯ ಸರ್ಕಾರ ವೈದ್ಯಕೀಯ ತಪಾಸಣಾ ಶಿಬಿರ ನಡೆಸುವ ಮೂಲಕ ಅಂತಹ ಮಕ್ಕಳಿಗೆ ಚಿಕಿತ್ಸೆ ನೀಡುವುದೇ ಮೌಲ್ಯಾಂಕನ ಶಿಬಿರದ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಅವರು ಹೇಳಿದರು. ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ 1ರಿಂದ 12ನೇ ತರಗತಿಯ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು…


