ನ.೮ಕ್ಕೆ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ರ‍್ಥಪರ‍್ಣ ಆಚರಣೆ
ಸಕಲ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ಕಲಬುರಗಿ, ಸಂತ ಶ್ರೇಷ್ಟ ಕನಕದಾಸರ ಜಯಂತಿ ಕರ‍್ಯಕ್ರಮ ನವೆಂಬರ್ ೮ ರಂದು ಕಲಬುರಗಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಣೆಗೆ ನರ‍್ಧರಿಸಲಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಯಂತಿಯ ಪರ‍್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೩ ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜಯಂತಿ ಕರ‍್ಯಕ್ರಮ ಆಚರಿಸಲಾಗುತ್ತದೆ ಎಂದರು. ಜಯಂತಿಗೆ ಶಿಷ್ಟಾಚಾರದಂತೆ…


