
ದಸರಾ ಮತ್ತು ದೀಪಾವಳಿ ಹಬ್ಬ-2025 ವಿಶೇಷ ರೈಲುಗಳ ಸಂಚಾರ
ಕಲಬುರಗಿ, -ಮುಂಬರುವ ದಸರಾ ಹಾಗೂ ದೀಪಾವಳಿ ಹಬ್ಬ-2025ರ ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೋಲಾಪುರ ವಿಭಾಗದಿಂದ ಕೇಂದ್ರ ರೈಲ್ವೆ ಇಲಾಖೆಯು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೌಂಡ್-ಕಲಬುರಗಿ ರೈಲು: ವಾರದಲ್ಲಿ 5 ದಿನಗಳು ಕಾಯ್ದಿರಿಸದ ವಿಶೇಷ (ರೈಲು ಸಂಖ್ಯೆ 01421) ಸೆಪ್ಟೆಂಬರ್ 26 ರಿಂದ ಡಿಸೆಂಬರ್ 1 ರವರೆಗೆ ಪ್ರತಿ ಸೋಮವಾರ, ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ 5 ಗಂಟೆಗೆ…