ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿ ಇದೆ

*ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳು.. *ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ ಒಳ್ಳೆಯದು ಎನ್ನುವ ಅಭಿಪ್ರಾಯಕ್ಕೆ…

Read More

ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಸಿಎಂಗೆ ಸಚಿವರ ಮನವಿ ಪತ್ರ

ಬೆಂಗಳೂರ : ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೇಟಿಯಾಗಿ, ಬೀದರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾರ್ಯಗಳನ್ನು ವಿವರಿಸಿ, ಬೆಳೆನಷ್ಟ, ಮನೆ – ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಭೀಮಾ ನದಿ‌ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಂಗಳವಾರ ಪ್ರವಾಸ ಕೈಗೊಂಡು, ಕಲಬುರ್ಗಿ,…

Read More

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ನೀಡಿದ…

Read More

PWD ಅಧಿಕಾರಿಯ ಮುಖಕ್ಕೆ ಮಸಿ ಬಳಿದ ಪ್ರಕರಣ| 11 ಜನ ಬಂಧನ

ಕಲಬುರಗಿ; ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿ ಮುಂದೆ, ಕಣ್ಣಿ ಮಾರುಕಟ್ಟೆಯಲ್ಲಿ ಕನ್ನಡ ಫಲಕ ತೆಗೆಯುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಲೋಕೋಪಯೋಗಿ ಅಧಿಕಾರಿಯ ಮೇಲೆ ಪ್ರತಿಭಟನಾ ಸಂದರ್ಭದಲ್ಲಿ ಕಪ್ಪು ಬಣ್ಣ ಬಳಿದಿದ್ದಾರೆ ಎಂಬ ಆರೋಪದ ಮೇಲೆ 11 ಜನರ ವಿರುದ್ದ ಸ್ಟೇಷನ್ ಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 11 ಜನರನ್ನು ಬಂಧಿಸಿದ್ದಾರೆ.

Read More

ಮುಖ್ಯಮಂತ್ರಿಗಳಿಂದ 649.47 ಕೋಟಿ ರೂ. ಮೊತ್ತದ ಅಭವೃದ್ಧಿ ಕಾರ್ಯಗಳಿಗೆ ಚಾಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಮಾರಂಭದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಭಾಗದ ಕೆ.ಕೆ.ಆರ್.ಡಿ.ಬಿ ಮತ್ತು ಇತರೆ ಇಲಾಖೆಯ 570.05 ಕೋಟಿ ರೂ. ಮೊತ್ತದ 133 ಕಾಮಗಾರಿಗಳಿಗೆ ಅಡಿಗಲ್ಲು ಮತ್ತು 79.41 ಕೋಟಿ ರೂ. ಮೊತ್ತದ 26 ಕಾಮಗಾರಿಗಳ ಲೋಕಾರ್ಪಣೆ ಸೇರಿದಂತೆ ಒಟ್ಟಾರೆ 649.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದರಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿಯಲ್ಲಿ 350.05 ಕೋಟಿ ರೂ. ಮೊತ್ತದ 112 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರೆ 3.35 ಕೋಟಿ ರೂ. ಮೊತ್ತದ…

Read More

ಸಂಗೊಳ್ಳಿ ರಾಯಣ್ಣರ ಹೆಸರು ಶಾಶ್ವತಗೊಳಿಸಲು ರಾಯಣ್ಣ ಪ್ರಾಧಿಕಾರ ರಚಿಸಲಾಯಿತು: ಸಿ.ಎಂ.ಸಿದ್ದರಾಮಯ್ಯ

ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಬರೆಸಿ: ಹೀಗಾದ್ರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲ ಸಿಗುತ್ತದೆ: ಸಿ.ಎಂ ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿ.ಎಂ ಭರವಸೆ ಕಲ್ಬುರ್ಗಿ : ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ…

Read More

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿ.ಎಂ.ಸಿದ್ದರಾಮಯ್ಯ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ‌ ಸಭೆ ನಡೆಸಿದ ಸಿಎಂ ಸಭೆ ಬಳಿಕ ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ…

Read More

ಸರ್ಕಾರಿ ಅದೇಶ ಹೊರಡಿಸಿ ಉತ್ಸವ ದಿನದಂದು ಕೊಡುಗೆ ನೀಡಿದ ಸಿದ್ದರಾಮಯ್ಯ ಸರ್ಕಾರ

ಕಲ್ಯಾಣ ಕರ್ನಾಟಕ ಪ್ರತ್ಯೇಕ ಇಲಾಖೆಗೆ ಸರ್ಕಾರ ಅಸ್ತು ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ  ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ ಇಮ್ಮಡಿಗೊಳಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು‌. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ…

Read More

ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಸಚಿವ ಪ್ರಿಯಾಂಕ್ ಖರ್ಗೆ.

ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಸಚಿವ ಪ್ರಿಯಾಂಕ್ ಖರ್ಗೆ. ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ತಮ್ಮ ” ಎಕ್ಸ್ ” ಖಾತೆಯಲ್ಲಿ ಬರೆದುಕೊಂಡಿರುವ…

Read More

ಧರ್ಮಸ್ಥಳ, ಮದ್ದೂರು ಚಲೋ ಆಯ್ತು. ಪ್ರಚೋದನೆ ಹೇಳಿಕೆ ನೀಡುವುದು ಬಿಜೆಪಿ ನಾಯಕರ ಚಾಳಿಯಾಗಿದೆ | ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಧರ್ಮಸ್ಥಳ, ಮದ್ದೂರು, ಚಾಮುಂಡೇಶ್ವರಿ‌ ಚಲೋ, ಬಿಜೆಪಿಯವರಿಗೆ ಬೇಕಾಗಿರುವುದಾದರೂ ಏನು ? ಕಾಮನ್ ಸೆನ್ಸ್ ಇದೆಯಾ ? ಧರ್ಮಸ್ಥಳ, ಮದ್ದೂರು ಚಲೋ ಆಯ್ತು. ಪ್ರಚೋದನೆ ಹೇಳಿಕೆ ನೀಡುವುದು ಬಿಜೆಪಿ ನಾಯಕರ ಚಾಳಿಯಾಗಿದೆ. ಬಿಜೆಪಿಗರು ರಾಜ್ಯವನ್ನು ಯುಪಿ, ಬಿಹಾರ ಮಾಡಹೊರಟಿದ್ದಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. ಅವರು ಕಲಬುರಗಿ ನಗರದಲ್ಲಿಂದು ಸುದ್ದಿಗಾರರೋಂದಿಗೆ ಮಾತನಾಡಿ ,ಬಾಡಿಗೆ ಬಾಷಣಕಾರರು ಸೇರಿದಂತೆ ಪ್ರತಾಪ್ ಸಿಂಹ, ಸಿಟಿ ರವಿ ಅವರು ತಮ್ಮ ಮಕ್ಕಳ…

Read More
error: Content is protected !!