ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ನಂತರ ರಾಷ್ಟ್ರ ಧ್ವಜಾರೋಹಣ ಮಾಡಿದರು.
ಇದೇ ವೇಳೆ ಪಿಎಸ್’ಐ ಶ್ರೀಶೈಲ್ ಅಂಬಾಟಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಕವಾಯತು ನಡೆಸಿ ಗೌರವ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಮಹ್ಮದ್ ಅಕ್ರಂ ಪಾಶಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಅನೇಕ ಮುಖಂಡರು, ಶಿಕ್ಷಕರು ಹಾಗೂ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಇದ್ದರು.