ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಮಳೆ ಹಾಗೂ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು ಮಳೆ ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.

ನಂತರ ಸಚಿವರು ಬೆಣ್ಣತೊರ ನದಿಯ ನೀರಿನಿಂದ ಪ್ರವಾವಕ್ಕೀಡಾಗಿರುವ ಚಿತ್ತಾಪುರ ತಾಲೂಕಿನ‌ ಕಣಸೂರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ನಂತರ ತಾಲೂಕಿನ ಗುಂಡಗುರ್ತಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!