ಕಲಬುರಗಿ : 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂಎಂ ಎಲ್ ಸಿ ಜಗದೇವ ಗುತ್ತೇದಾರ ಧ್ವಜಾರೋಹಣ ನೆರವೇರಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ, ನಿನ್ನೆ ಲಿಂಗೈಕ್ಯರಾದ ಪೂಜ್ಯ ಡಾ ಶರಣಬಸವಪ್ಪ ಅಪ್ಪಾಜೀ ಅವರಿಗೆ ಗೌರವ ಸೂಚಿಸುವ ಸಲುವಾಗಿ ಎರಡು ನಿಮಿಷದ ಮೌನಾಚರಣೆ ಮಾಡಲಾಯಿತು.


