ಗೋಗಿ: ಶಿಕ್ಷಣ ಇಲಾಖೆ(ಪದವಿ ಪೂರ್ವ)ಯಿಂದ ಶಹಾಪೂರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಬಾಲಕಿಯರ ಥ್ರೋ ಬಾಲ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕರ ಥ್ರೋ ಬಾಲನಲ್ಲಿ ದ್ವೀತಿಯ ಸ್ಥಾನ, ಗುಂಡು,ಚಕ್ರ,ಭರ್ಚಿ ಎಸೆತದಲ್ಲಿ ಪ್ರಥಮ ಸ್ಥಾನ, 200 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ರೀಲೆ ಪ್ರಥಮ, 3000 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ. 5000. ಮೀಟರ್ ರನ್ನಿಂಗ್ ಮತ್ತು ವಾಕಿಂಗ್ ಹಾಗೂ 3,000 ಮೀಟರ್ ರನ್ನಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನಗೆ ಕಾಲೇಜಿನ ಪ್ರಾಚಾರ್ಯರಾದ ಶ್ರೀ ರಾಮಚಂದ್ರ ಗುಂಡೇಕರ್, ಉಪನ್ಯಾಸಕರಾದ ಗುರುಲಿಂಗಪ್ಪ ಸಾಗರ್ ಕಾಮಣ್ಣ ಜೆಕೆ . ಹೊನ್ನಪ್ಪ ಎಂಪಿ ಶರಣು ಹೊಸಮನಿ ಶ್ರೀಮತಿ ಮೆಹಬೂಬಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.