ಚಿಂತನಹಳ್ಳಿಯಲ್ಲಿ ಪೋಷಣಾ ಮಾಸಾಚರಣೆ ಕಾರ್ಯಕ್ರಮ 

ಗುರುಮಠಕಲ್: ತಾಲೂಕಿನ ಕಂದಕೂರ ಪಿಎಚ್‌ಸಿ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶರಣಮ್ಮಾ ರವರು ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ರವರು ಮಾತನಾಡಿ, “ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ತಡೆಗಟ್ಟಲು ಪೌಷ್ಟಿಕ ಆಹಾರ ಸೇವನೆ ಮುಖ್ಯಎಂದು ಅಭಿಪ್ರಾಯಪಟ್ಟರು. ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ರವರು ಸ್ವಸ್ಥ ನಾರಿ–ಸಶಕ್ತ ಪರಿವಾರ ಅಭಿಯಾನ ಅಡಿಯಲ್ಲಿ ಲಭ್ಯವಿರುವ ವಿವಿಧ ಆರೋಗ್ಯ ಸೌಲಭ್ಯಗಳ ಬಗ್ಗೆ ತಿಳಿಸಿದರು.
 ಪಿಎಚ್‌ಸಿಒ ಜ್ಯೋತಿ ರವರು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ವೈಯಕ್ತಿಕ ಸ್ವಚ್ಛತೆ ಮತ್ತು ಕುಟುಂಬ ಕಲ್ಯಾಣ ಕ್ರಮಗಳ ಅಗತ್ಯತೆ ಕುರಿತು ತಿಳಿಸಿದರು.ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆ ಗೌರಮ್ಮ ರವರು ಸಂಪ್ರದಾಯಬದ್ಧವಾಗಿ ಸೀಮಂತ ಮತ್ತು ಅನ್ನಪ್ರಸನ ಕಾರ್ಯಕ್ರಮಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಸಿಎಚ್ಒ ಗೃಹ ಆರೋಗ್ಯ ಕಾರ್ಯಕ್ರಮದ ಕುರಿತಂತೆ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಚನ್ನಮ್ಮ ರವರು ನಿರೂಪಿಸಿದರು. ಗ್ರಾಮದ ಅನೇಕ ಗರ್ಭಿಣಿಯರು, ತಾಯಂದಿರು, ಮಕ್ಕಳು, ಹಿರಿಯರು, ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!