ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಡಿವೈಎಸ್ಪಿ ಸುರೇಶ್. ಎಮ್ ಅವರು ಹೇಳಿದರು.
ತಾಲ್ಲೂಕಿನ ಚಂಡ್ರಿಕಿ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ವೇಳೆ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗದಂತೆ ಎಲ್ಲ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಸಮಾನ ಮನೋಭಾವದಿಂದ ಆಚರಿಸುವುದು ಸಮಾಜದಲ್ಲಿ ಶಾಂತಿ, ಸಾಮರಸ್ಯ ಕಾಪಾಡಲು ಅತ್ಯಂತ ಮುಖ್ಯವೆಂದರು.
ಸಂಧರ್ಭದಲ್ಲಿ ಪಿ. ಐ. ವೀರಣ್ಣ ದೊಡ್ಡಮನಿ ಮಾತನಾಡಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಣ್ಣ ಪುಟ್ಟ ಮಕ್ಕಳು ಮೆರವಣಿಗೆ ಹೋಗದಂತೆ ಪೋಷಕರು ಗಮನಹರಿಸಿ ಎಂದು ಮನವಿ ಮಾಡಿದರು. ಸಾರ್ವಜನಿಕರು ಸುರಕ್ಷತೆಗಾಗಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನೈಸರ್ಗಿಕ ಪರಿಸರವನ್ನು ಕಾಪಾಡುವಲ್ಲಿ ಸಹಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಶಾಂತಗೌಡ ಬಿರಾದಾರ, ಪಿಡಿಓ ಗೀತಾ, ಶಿವರಾಮ ರೆಡ್ಡಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.