ಸೆ ೧೪ ರಂದು  ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜುನಲ್ಲಿ ಪ್ರತಿಭಾ ಪುರಸ್ಕಾರ

ಗುರುಮಠಕಲ್ : ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇದೇ ಸೆ. ೧೪ ರಂದು ಬೆಳಿಗ್ಗೆ ೧೦.೩೦ಕ್ಕೆ – ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ೨೦೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಸಂತೋಷ ಕುಮಾರ ನೀರೇಟಿ ತಿಳಿಸಿದ್ದಾರೆ.

ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಮಾರಂಭ ಉದ್ಘಾಟಿಸಿಲಿದ್ದಾರೆ. ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿಕಾರಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೂ ನಮ್ಮ ತಾಲೂಕಿನಿಂದ ಎಸ್.ಎಸ್.ಎಲ್.ಸಿಯಲ್ಲಿ ೦೬ ಹಾಗೂ ದ್ವಿತೀಯ ಪಿಯುಸಿಯಲ್ಲಿ ೦೫ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಅನುಷ್ಕಾ ಶುಕ್ಲಾ, ಹರಿಪ್ರಿಯಾ ನೀರೇಟಿ, ಮಲ್ಲಿಕಾರ್ಜುನ, ನಿಭಾತ ಭಸುಮ್, ಸ್ಫೂರ್ತಿರೆಡ್ಡಿ, ಉದಯಕಿರಣ್.ಜೆ ಹಾಗು ಪಿಯುಸಿ ವಿದ್ಯಾರ್ಥಿಗಳಾದ ಅಪ್ಷ ತಹರಿನ್, ಹರೀಶ್ ಕುಮಾರ್ ಎ.ಹೆಚ್,ಖತಿಜಾ ಜೈನಬ್, ಕೃತಿಕಾ ರೆಡ್ಡಿ, ಜುಬಿಯಾ ತಬಸುಮ್ ಆಯ್ಕೆಯಾದ ವಿದ್ಯಾರ್ಥಿಗಳು ಸಭಾಂಗಣಕ್ಕೆ ಆಗಮಿಸಿ, ಬೆಳಿಗ್ಗೆ ೯ ರಿಂದ ೧೦.೩೦ರ ಒಳಗೆ ಕಡ್ಡಾಯವಾಗಿ ತಮ್ಮ ಹೆಸರು ನೋಂದಣಿ ಮಾಡಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ನಿಗದಿತ ಅವಧಿಯ ನಂತರ ಹೆಸರು ನೋಂದಣಿಗೆ ಅವಕಾಶ ಇರುವುದಿಲ್ಲ. ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ಶ್ರೀನಿವಾಸ್ ಮಡಿವಾಳ, ಕಾರ್ಯದರ್ಶಿ ಮಾಣಿಕ್ಯಪ್ಪ, ಉಪಾಧ್ಯಕ್ಷ ಪ್ರಶಾಂತ್ ಹಾಗು ರಾಜ್ಯ ಪರಿಷತ್ ಸದಸ್ಯ ಹರಿಕೃಷ್ಣ ಇದ್ದರು.

Leave a Reply

Your email address will not be published. Required fields are marked *

error: Content is protected !!