ಅಫಜಲಪುರ : ತಾಲೂಕಿನ ದೇವಲ್ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ, ಸೌಲಭ್ಯ ಒದಗಿಸಿರುವುದರ ಕುರಿತು ಮಾಹಿತಿ ಪಡೆದುಕೊಂಡರು.
ತಾಲೂಕಿನ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಕೂಡಾ ಸಚಿವರ ಪರಿಶೀಲಿಸಿ ರೈತರೊಂದಿಗೆ ಮಾತನಾಡಿದರು.ತೊಗರಿ ಸೇರಿದಂತೆ ಇತರೆ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದ ಸಚಿವರು ಸ್ಥಳದಲ್ಲಿದ್ದ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಬೆಳೆ ಹಾನಿಯಾದ ಕುರಿತು ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.