ನ.30 ರಂದು ಡಾ. ಬಿ.ಆರ್. ಅಂಬೇಡ್ಕರ ಅವರ ಪ್ರತಿಮೆ ಅನಾವರಣ ಸಮಾರಂಭ

ಕಲಬುರಗಿ : ತಾಲೂಕಿನ ನಂದಿಕೂರ ಗ್ರಾಮದಲ್ಲಿ ನ.30 ರವಿವಾರ ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ ಡಾ| ಬಿ.ಆರ್. ಅಂಬೇಡ್ಕರ ರವರ ಪಂಚಲೋಹದ ಪ್ರತಿಮೆ ಅನಾವರಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ದಿನೇಶ ದೊಡ್ಡಮನಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವರು ನಗರದ ಪತ್ರಿಕಾಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ರವರು ಉದ್ಘಾಟನೆ ಮಾಡಲಿದ್ದಾರೆ. ಪೂಜ್ಯಭಂತೆ ವರಜ್ಯೋತಿ ಸಾನಿಧ್ಯ ವಹಿಸಲ್ಲಿದ್ದಾರೆ. ನೀಲಿಧ್ವಜ ಮತ್ತು ಪಂಚಶೀಲ ಧ್ವಜಾರೋಹಣ ಸಂಸದ ರಾಧಾಕೃಷ್ಣ ದೊಡ್ಡಮನಿ ರವರು ನೇರವೇರಿಸಲ್ಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಹಿಸಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶೇಷ ಸನ್ಮಾನವನ್ನು ಹಿರಿಯ ದಲಿತ ಮುಖಂಡ ಡಾ| ವಿಠಲ ದೊಡ್ಡಮನಿ ಸ್ವೀಕರಿಸಲ್ಲಿದ್ದಾರೆ. ಅದೇ ರೀತಿಯಾಗಿ ಮುಖ್ಯ ಅತಿಥಿಗಳಾಗಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮತ್ತು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರು ಹಾಗೂ ಜೇವರ್ಗಿ ಮತಕ್ಷೇತ್ರ ಶಾಸಕರಾದ ಡಾ| ಅಜಯ್‌ಸಿಂಗ್ ಮತ್ತು ಉತ್ತರ ಮತಕ್ಷೇತ್ರದ ಶಾಸಕಿಯಾದ ಶ್ರೀಮತಿ ಖನೀಜ್ ಫಾತೀಮಾ ಹಾಗೂ ವಿಧಾನ ಪರಿಷತ ಸದಸ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಮತ್ತು ವಿಧಾನ ಪರಿಷತ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹಾಗೂ ವಿಧಾನ ಪರಿಷತ ಸದಸ್ಯ ಚಂದ್ರಶೇಖರ ಪಾಟೀಲ ಹಾಗೂ ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ ಪಾಟೀಲ ಹಾಗೂ ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ ಮೂಲಗೆ ಜೇಸ್ಕಾಂ ಅಧ್ಯಕ್ಷ, ಪ್ರವೀಣ ಪಾಟೀಲ ಹರವಾಳ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ ಆಲಂ ಖಾನ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!