ಜ. 11 ರಂದು ಪ್ರಥಮ ವಾರ್ಷಿಕೋತ್ಸವ ಸಭೆ
ಕಲಬುರಗಿ : ಜ.11 ರವಿವಾರ ರಂದು ನಗರದ ಕನ್ನಡ ಭವನದಲ್ಲಿ ಪ್ರಥಮ ವಾರ್ಷಿಕೋತ್ಸವ ಸಭೆ ನಿಮಿತ್ಯ, ಕೆಕೆ ಟೈಗರ್ಸ ಬ್ರಿಗೇಡ್, ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೋಳ್ಳಲಾಗಿದೆ ಎಂದು ಸತೀಯಕುಮಾರ ಸೂಗುರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆ ವಿಶ್ವ ಸೇವಾ ಶಂಕರ್ ಸಂಸ್ಥಾಪಕರು ಹಾಗೂ ಅಧ್ಯಕ್ಷರು,
ಶ್ರೀ ವಿಶ್ವನಾಥ ಗುರುಜೀ ಮಾಡಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮುಡ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು


