ಮಳೆಯಿಂದ ಬೆಳೆ ಹಾನಿ ; ಒಂದು ಎಕರೆ ಪ್ರದೇಶಕ್ಕೆ ₹25 ಸಾವಿರ ಪರಿಹಾರಕ್ಕೆ ಒತ್ತಾಯ | ನಿಖಿಲ್ ಕುಮಾರಸ್ವಾಮಿ

* ಈ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ, ಅಭಿವೃದ್ಧಿ ಶೂನ್ಯ

* ರೈತರ ಪಕ್ಷ ಜೆಡಿಎಸ್, ರೈತರ ಜೊತೆಯಲ್ಲಿ ನಿಂತು ಹೋರಾಟ ಮಾಡುತ್ತೆವೆ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕೆಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಅಭಿವೃದ್ಧಿ ಮಾಡುವಲ್ಲಿ ಈ ಸರ್ಕಾರ ವಿಫಲವಾಗಿದೆ. ಘೋಷಿಸಿದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರದ ಖಜಾನೆಯಲ್ಲಿ ದುಡ್ಡ ಇದಿಯೋ, ಇಲ್ಲವೋ ಸರ್ಕಾರನೇ ಉತ್ತರಿಸಬೇಕೆಂದು ನಿಖಿಲ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕದಲ್ಲಿ ಕಲ್ಯಾಣ ಆಗ್ತಿಲ್ಲ, ರಸ್ತೆಗಳೆಲ್ಲ ಗುಂಡಿಗಳು ಬಿದ್ದಿವೆ

ಕಲ್ಬುರ್ಗಿ ನಗರದ ರಸ್ತೆಗಳೆಲ್ಲ ಗುಂಡಿಗಳು ಬಿದ್ದಿವೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5000 ಕೊಟ್ಟಿದೆ ಅಂತ ಹೇಳ್ತಾರೆ. ಕಲ್ಬುರ್ಗಿಯ ರಸ್ತೆಗಳನ್ನು ನಿರ್ಮಿಸುವುದನ್ನು ಬಿಡಿ. ಗುಂಡಿಗಳನ್ನು ಮುಚ್ಚುವ ಕೆಲಸ ಕಲ್ಬುರ್ಗಿಯಿಂದ ಆರಂಭಿಸಲಿ ಎಂದು ಸರ್ಕಾರ ವಿರುದ್ಧ ಗುಡುಗಿದರು.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಬಾರಿ ಮಳೆ ಆಗಿದೆ. ಪ್ರದೇಶದಲ್ಲಿ ಬೆಳೆದಿದ್ದ ಹೆಸರು ತೊಗರಿ ಉದ್ದು ಹೆಸರು ಮತ್ತಿತರ ಬೆಳೆಗಳು ಹಾಳಗಿದೆ.ಈಗಾಗಲೇ ಸರ್ಕಾರಿಂದ ವರದಿ ಕೂಡ ಸಿದ್ದ ಮಾಡಿದ್ದಾರೆ. ಕಲಬುರಗಿ ಜಿಲ್ಲೆ ತೊಗರಿ ಕಣಜ.ಸಾವಿರಾರು ಹೆಕ್ಟೇರ್ ಪ್ರದೇಶ ಸಂಪೂರ್ಣ ಹಾಳಾಗಿದೆ.
ರಾಜ್ಯದಲ್ಲಿ ಬೆಳೆ ಹಾನಿ ಪ್ರದೇಶದಲ್ಲಿ ಸಂತ್ರಸ್ತರ ಬೇಟಿ ಮಾಡುತ್ತಿದ್ದೆವೆ ನಮ್ಮ ಪಕ್ಷದಿಂದ ವರದಿ ತಯಾರು ಮಾಡುತ್ತೆವೆ. ಅದನ್ನ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ. ಎಂದು ತಿಳಿಸಿದ ಅವರು
ಎಕರೆಗೆ 25 ಸಾ ಪರಿಹಾರ ನೀಡಿ ಅಂತ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೊಡ್ಡಪ್ಪಗೌಡ ನರಿಬೋಳ್, ಬಾಲರಾಜ್ ಗುತ್ತೇದಾರ್, ಶಿವಕುಮಾರ್ ನಾಟಿಕರ್, ಕೃಷ್ಣಾರೆಡ್ಡಿ,ಬಸವರಾಜ್ ತಡಕಲ್,ದೇವೆಗೌಡ ತೆಲ್ಲೂರ,ಬಸವರಾಜ ಬಿರಬಟ್ಟಿ ಸೇರಿದಂತೆ ಜಿಲ್ಲೆಯ ಪ್ರಮುಖರು ಜೊತೆಯಲ್ಲಿದ್ದರು.

ರೈತರ ವಿಷಯಕ್ಕೆ ಬಂದಾಗ ರಾಜಕೀಯ ಮಾಡಲ್ಲ

ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ರೈತರು ಕುಮಾರಣ್ಣ ರೈತ ಸಾಲ ಮನ್ನಾ ವಿಚಾರ ಸ್ಮರಿಸಿದ್ದಾರೆ. 14 ತಿಂಗಳ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಾಲ ಮನ್ನಾ ಮಾಡಿದ್ದಾರೆ. ರೈತರ ವಿಷಯಕ್ಕೆ ಬಂದಾಗ ರಾಜಕೀಯ ಮಾಡಲ್ಲ. ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತೇವೆ

ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷ

Leave a Reply

Your email address will not be published. Required fields are marked *

error: Content is protected !!