ಕಲಬುರಗಿ: ಕೋಲಿ ಸಮಾಜದ ಹಿರಿಯ ಮುಖಂಡ ಶಿವಶರಣಪ್ಪ ಕೋಬಾಳ ಅವರು ಜಿಲ್ಲೆಯಲ್ಲಿ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿ, ಪಕ್ಷದ ಸಂಘಟನೆಯಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಯಾವುದಾದರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮ ನಿರ್ದೇಶನ ಮಾಡುವಂತೆ ಕೋಲಿ ಸಮಾಜದ ಮುಖಂಡ ತಾಲೂಕ ಪಂಚಾಯತ್ ಮಾಜಿ ಸದಸ್ಯರಾದ ಮೈಲಾರಿ ಬಣಮಿ, ದಶರಥ ಕೂಡಲಗಿ ಜಗನ್ಮಾಥ ಕೋಬಾಳ್, ದೇವಿಂದ್ರ ನಿಂಗಬೋ ಕೂಡಿ, ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಕಳೆದ ೧೯೭೨ ರಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿರುತ್ತಾರೆ. ಯಾವದೇ ಫಲಾಪೇಕ್ಷೆಯಿಲ್ಲದೇ ಇಂದಿನವರೆಗೂ ಪಕ್ಷದ ಶ್ರೇಯಸ್ಸಿಗಾಗಿ ಹಗಲಿರಳು ದುಡಿಯುತ್ತಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಚುನಾವಣೆಯಿದ್ದರೂ ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದಾರೆ. ವಿವಿಧ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ, ಓಬಿಸಿ ಅಧ್ಯಕ್ಷರಾಗಿ, ಕೆಪಿಸಿಸಿ ಸಮಿತಿಯ ಸದಸ್ಯ, ಕಿಸಾನ ಘಟಕದ ಕಾರ್ಯದರ್ಶಿ, ಕಾರ್ಯಕಾರಿಣಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಶಿಕ್ಷಣಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಒತ್ತಾಯಿಸಿದ್ದಾರೆ.