ಪ್ರಜಾಪ್ರಭುತ್ವ ಬೆಳೆಸುವದು ನಮ್ಮೆಲ್ಲರ ಕರ್ತವ್ಯ: ಡಾ. ನಯನತಾರಾ

ಕಲಬುರಗಿ: ಪ್ರಜಾಪ್ರಭುತ್ವ ಬೆಳಸಬೇಕು ಅಂದರೆ ಮೊದಲು ಶಾಂತಿ ಬೇಕು,ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳು ಇರಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ ನಯನತಾರಾ ಸಿ. ಎ. ನುಡಿದರು.

ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣಬೇಕು, ಸಾಕ್ಷರತೆಬೇಕು ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಹಾಗೂ ನಮ್ಮಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ. ವೀಣಾ ಎಚ್. ಅವರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗೀತಾ ಪಾಟೀಲ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಭಾಗದ ವಿದ್ಯಾರ್ಥಿನಿಯಾದ ದಿವ್ಯಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸವಿತಾ ಪ್ರಾರ್ಥನೆ ಗೀತೆ ಹಾಡಿದರು ಮತ್ತು ವೈಷ್ಣವಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ. ಶ್ರೀದೇವಿ ಸರಡಗಿ, ಡಾ. ನಾಗರತ್ನ ಎಸ್., ಸುಷ್ಮಾ ಕುಲಕರ್ಣಿ, ಬಸಮ್ಮ ಗೊಬ್ಬುರ, ಡಾ. ಮೋಹಸೀನಾ, ಕವಿತಾ ಅಶೋಕ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿಭಾಗದ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!