ಕ್ರೀಡೆಗಳಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿ: ತಿಪ್ಪಣ್ಣ ಶಿರಸಗಿ

ಯಾದಗಿರಿ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ ಹೇಳಿದರು.

ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕ್ರೀಡಾ ಇಲಾಖೆ,ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ  ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡೆಗಳು ಸಾಂಸ್ಕೃತಿಕ ಸಂಗೀತ ಜಾನಪದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕ್ರೀಡೆಗಳಿಂದ ಎಲ್ಲಾ ಚಿಂತೆ ನೋವುಗಳನ್ನು ಮರೆಯಬಹುದು ಕ್ರೀಡೆ ಆರೋಗ್ಯಕ್ಕೆ ಉತ್ತಮ ಔಷಧಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಾ ನಿವೃತ್ತ ಅಧಿಕಾರಿ ಡಾ. ಭಗವಂತ ಅನವಾರ ಮಾತನಾಡಿ.ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡೆಗಳು ಸಾಂಸ್ಕೃತಿಕ ಸಂಗೀತ ಜಾನಪದ ಕಾರ್ಯಕ್ರಮಗಳು ಹಮ್ಮಿಕೊಂಡಿರುವುದು ಒಳ್ಳೆಯ ಕಾರ್ಯ ಹಿರಿಯ ನಾಗರಿಕರು ದಿನನಿತ್ಯ ಯೋಗ ವ್ಯಾಯಾಮ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ ಪ್ರತಿಯೊಬ್ಬ ಹಿರಿಯರು ದಿನನಿತ್ಯ ಯೋಗ ವ್ಯಾಯಾಮ ಧ್ಯಾನ ಮಾಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜಿಲ್ಲಾ ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಮಾತನಾಡಿ.ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಮ್ಮ ಹಿರಿಯ ನಾಗರಿಕರಿಗಾಗಿ ನಮ್ಮ ಇಲಾಖೆ ವತಿಯಿಂದ ಪ್ರತಿ ವರ್ಷವೂ ವಿವಿಧ ಕ್ರೀಡೆ ಸಾಂಸ್ಕೃತಿಕ ಜಾನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಒಂದು ಕಾರ್ಯಕ್ರಮದಲ್ಲಿ ಹಿರಿಯರು ಅತ್ಯಂತ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ.

ಅ. 3ರಂದು ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯಂತ ಹಿರಿಯ ನಾಗರಿಕರನ್ನು ಗೌರವಿಸಲಾಗುವುದು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ಹಿರಿಯ ನಾಗರಿಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ಸರಕಾರಿ ಸಂಘದ ಜಿಲ್ಲಾಧ್ಯಕ್ಷರಾದ ಬಂಡೆಪ್ಪ ಆಕಳ್, ಜಿಲ್ಲಾ ನಿವೃತ್ತ ಸರ್ಜನ್ ಡಾ.ಭಗವಂತ ಅನವಾರ, ಅಜಿತ್ ಧೋಕಾ, ಶ್ರೀ ಸಾಯಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಹಿರಿಯ ನಾಗರಿಕರ ಸೇವೆ ಸಲ್ಲಿಸುತ್ತಿರುವ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ನಗರ ವಿವಿಧೋದ್ದೇಶ, ಪುನರ್ವಸತಿ ಕೇಂದ್ರದ ಕಾರ್ಯಕರ್ತರು ಜಿಲ್ಲೆಯ ವೃದ್ಧಾಶ್ರಮ ಕೇಂದ್ರದ ಸಿಬ್ಬಂದಿಗಳು, ವಿವಿಧ ಇಲಾಖೆಯ ಸಿಬ್ಬಂದಿಗಳು ಹಿರಿಯ ನಾಗರಿಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರುಹೇಳಿದರು ಕ್ರಮವನ್ನು ವಿಶ್ವನಾಥ್ ರೆಡ್ಡಿ.ಅಬ್ಬೆತುಮಕೂರು ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!