ಮುಖ್ಯಮಂತ್ರಿಗಳಿಂದ ಬೆಳೆ ಹಾನಿ ಪರಿಶೀಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಲಬುರಗಿ ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಇತ್ತೀಚಿನ ಮಳೆಯಿಂದಾದ ಬೆಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದರು.

ರೈತ ಚೆನ್ನಬಸಪ್ಪ ಮತ್ತು ಸೂರ್ಯಕಾಂತ ಅವರ ಜಂಟಿ ಹೆಸರಿನಲ್ಲಿರುವ ಸರ್ವೆ ನಂ.50ರ 27 ಎಕರೆ 23 ಗುಂಟೆಯಲ್ಲಿ ಬೆಳೆಯಲಾದ ತೊಗರಿ ಮಳೆಯಿಂದ ಸಂಪೂರ್ಣ ಬೆಳೆ ಕೊಚ್ಚಿ ಹೋಗಿದ್ದನ್ನು ವೀಕ್ಷಿಸಿದರು. ಮಳೆಯಿಂದ ಮೂರನೇ ಬಾರಿಗೆ ಬಿತ್ತಿದ ತೊಗರಿ ಸಂಪೂರ್ಣ ಹಾಳಾಗಿದೆ. ಬೆಳೆ ಚೆನ್ನಾಗಿದ್ದರೆ ಎಕರೆಗೆ 5-6 ಚೀಲ ತೊಗರಿ ಬೆಳೆತಿತ್ತು ಎಂದು ರೈತ ಸಿ.ಎಂ. ಅವರಲ್ಲಿ ಅವಲತ್ತುಕೊಂಡನು. ಇನ್ನು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ಬೆಳೆ ಹಾನಿ ಕುರಿತು ಸಿ.ಎಂ. ಅವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ. ಅವರು, ಜಂಟಿ ಸಮೀಕ್ಷೆಯ ವರದಿ ಬಳಿಕ ಬೆಳೆ ಪರಿಹಾರ ನೀಡಲಾಗುವುದು. ವರದಿಗೆ ಕಾಯುತ್ತಿರುವೆ ಎಂದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ‌ ಸಿದ್ರಾಮಪ್ಪ ಧಂಗಾಪೂರ ಮಾತನಾಡಿ, ಬೆಳೆ‌ ವಿಮೆ ಹೊರತಾಗಿ ಎನ್.ಡಿ.ಆರ್.ಎಫ್ ಪರಿಹಾರದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪರಿಹಾರ ಘೋಷಿಸಬೇಕು. ಹಿಂಗಾರು ಬೆಳೆ ಬಿತ್ತನೆಗೆ ಸಬ್ಸಿಡಿ ರೂಪದಲ್ಲಿ ಒದಗಿಸಬೇಕು ಎಂದು ಸಿ.ಎಂ. ಬಳಿ ರೈತ ನಿಯೋಗದೊಂದಿಗೆ ಮನವಿ ಮಾಡಿಕೊಂಡರು.

ಸಚಿವ ಪ್ರಿಯಾಂಕ್ ಖರ್ಗೆ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ಡಿ‌ಸಿ. ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಅಯುಕ್ತ ಡಾ.ಎಸ್.ಡಿ.ಶರಣಪ್ಪ, ಇದ್ದರು.

Leave a Reply

Your email address will not be published. Required fields are marked *

error: Content is protected !!