ಬೆಂಗಳೂರ : ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೇಟಿಯಾಗಿ, ಬೀದರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾರ್ಯಗಳನ್ನು ವಿವರಿಸಿ, ಬೆಳೆನಷ್ಟ, ಮನೆ – ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿಪತ್ರ ಸಲ್ಲಿಸಿದರು.
ಈ ವೇಳೆ ಭೀಮಾ ನದಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಂಗಳವಾರ ಪ್ರವಾಸ ಕೈಗೊಂಡು, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪರಿಹಾರ ಕಾರ್ಯಗಳ ಪೂರ್ಣ ಮಾಹಿತಿ ಪಡೆದು, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕ್ರಮ ವಹಿಸುವುದಾಗಿ ಸಿಎಂ ಅವರು ಭರವಸೆ ನೀಡಿದರು.