ಕಲಬುರಗಿ: ವಿಶ್ವದ ಪ್ರತಿಯೊಂದು ಭಾಷೆಗೂ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆ ಇರುತ್ತದೆ. ಇಂದು ಭಾರತ ದೇಶದ ವಿವಿಧ ಭಾಗಗಳಲ್ಲಿ ಸಂಚರಿಸಲು ನಮಗೆ ಹಿಂದಿ ಸಂಪರ್ಕ ಭಾಷೆಯಾಗಿ ಸಹಕಾರಿಯಾಗುತ್ತದೆ. ನಮ್ಮ ಮಾತೃ ಭಾಷೆಯಾದ ಕನ್ನಡದ ಭಾಷೆಯೊಂದಿಗೆ ಹಿಂದಿ ಭಾಷೆ ಕಲಿಯುವುದು ಅನಿವಾರ್ಯ ಎಂದು ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಶಿವಕುಮಾರ ಹಡಪದ ಅವರು ನುಡಿದರು.
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಹಮ್ಮಿಕೊಂಡ ಹಿಂದಿ ದಿವಸ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
ಮುಂದುವರೆದು ಮಾತನಾಡುತ್ತಾ ಇಂದು ಹಿಂದಿ ಭಾಷೆಯು ವಿಶ್ವದ ತೃತೀಯ ಅತ್ಯಧಿಕ ಮಾತನಾಡುವ ಭಾಷೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹಿಂದಿ ಭಾಷೆ ತನ್ನದೇ ಆದ ಒಂದು ಸಂಸ್ಕೃತಿ ಮತ್ತು ಪರಂಪರೆ ಹೊಂದಿದೆ ಎಂದು ಹೇಳಿದರು. ಇದು ಕೇವಲ ಒಂದು ಭಾಷೆಯಾಗಿದೆ ಇದು ಒಂದು ಸಂಸ್ಕೃತಿಯಾಗಿದೆ ಎಂದು ನುಡಿದರು.
ಹಿಂದಿ ದಿವಸ ಕಾರ್ಯಕ್ರಮದ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಆ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ ಚವ್ಹಾಣ ಅವರು ಅತಿಥಿ ಗಳಿಗೆ ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಷ್ಮಾ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿದರು. ಕವಿತಾ ಠಾಕೂರ್ ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ಮಹೇಶ್ ಗಂವ್ಹಾರ, ಇತಿಹಾಸ ವಿಭಾಗ ಮುಖ್ಯಸ್ಥರಾದ ಡಾ ಸುಭಾಷಚಂದ್ರ ದೊಡ್ಡಮ್ಮನಿ, ಡಾ. ಜ್ಯೋತಿಪ್ರಕಾಶ್ ದೇಶಮುಖ, ಕ್ರೀಡಾ ವಿಭಾಗದ ಮುಖ್ಯಸ್ಥರಾದ ಡಾ ವಿಶ್ವನಾಥ್ ದೇವರಮನಿ, ಡಾ ಮೋಹಸೀನಾ ಫಾತಿಮಾ, ಬಸಮ್ಮ ಗೊಬ್ಬರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.