ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿ ಇದೆ

*ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳು..

*ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ ಒಳ್ಳೆಯದು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದೇವೆ.

ಇಲ್ಲದಿದ್ದರೆ ಕೆಲವರಿಗೆ ಮಾತ್ರ ಪರಿಹಾರ ಬಂದಿದೆ, ನಮಗೆ ಬಂದಿಲ್ಲ ಎನ್ನುವ ಗೊಂದಲ, ಅನುಮಾನಗಳು ಶುರುವಾಗಬಹುದು. ಈ ಕಾರಣಕ್ಕೇ ಎಲ್ಲರಿಗೂ ಒಟ್ಟಿಗೇ ಪರಿಹಾರ ಒದಗಿಸುವುದು ಸೂಕ್ತವಾಗಿದೆ

*ಸದ್ಯ ಜಮೀನಿಗೆ ಕಾಲಿಡುವ ಪರಿಸ್ಥಿತಿ‌ ಇಲ್ಲ. ಪ್ರವಾಹ ಇಳಿಕೆಯಾದ ಬಳಿಕ ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿ ಇದೆ. ಇದಕ್ಕೆ ಸಮೀಕ್ಷೆಯ ಅಗತ್ಯವಿದೆ ಎಂದರು.

*ಅಕ್ಕ ಪಕ್ಕದ ಪ್ರವಾಹ ಇಲ್ಲದ ಜಿಲ್ಲೆಗಳಿಂದ ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿಯೋಜಿಸುವ ಬಗ್ಗೆ ಯೂ ಸಭೆಯಲ್ಲಿ ತೀರ್ಮಾನಿಸಲಾಯಿತು.

*ಸದ್ಯ ಜನ, ಜನವಾರು ಪ್ರಾಣ ಹಾನಿ ಬಗ್ಗೆ ಸಮೀಕ್ಷೆ ಸಿಕ್ಕಿದೆ. ಆದರೆ ಪೂರ್ಣ ಸಮೀಕ್ಷೆ ಆಗಿಲ್ಲದ ಕಾರಣದಿಂದ ಮನೆಗಳ ಹಾನಿ ಬಗ್ಗೆ ಪೂರ್ಣ ವರದಿ ಇಲ್ಲ. ಸಮೀಕ್ಷೆ ಬಳಿಕ ಸರಿಯಾದ ಲೆಕ್ಕ ಸಿಗುತ್ತದೆ. ಆಗ ಎಲ್ಲಾ ಸಂತ್ರಸ್ಥರಿಗೂ ಪರಿಹಾರ ನೀಡಲು ಅನುಕೂಲ ಆಗುತ್ತದೆ*

*ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ಮತ್ತು ಪ್ರವಾಹ ಇದಾಗಿರುವುದರಿಂದ ಸಂಪರ್ಕ ರಸ್ತೆಗಳು, ಸೇತುವೆ, ಬ್ಯಾರೇಜ್ ಗಳು ತುಂಬಾ ಹಾನಿಯಾಗಿವೆ, ಮುಳುಗಡೆಯಾಗಿವೆ. ಹೀಗಾಗಿ ಈ ಬಗ್ಗೆಯೂ ಸಮೀಕ್ಷೆ ಮಾಡಿ ವರದಿ ನೀಡಲು ಸೂಚನೆ ನೀಡಲಾಯಿತು.

*ಮಹಾರಾಷ್ಟ್ರ, ಉಜನಿಯಲ್ಲಾಗುವ ಮಳೆ ಜೊತೆಗೆ ನಮ್ಮಲ್ಲೂ ಬೀಳುತ್ತಿರುವ ದಾಖಲೆ ಮಳೆ ಸೇರಿ ಅನಾಹುತದ ಪ್ರಮಾಣ ಹೆಚ್ಚಾಗುತ್ತಿದೆ.

*ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸಿಎಂ ಸೂಚಿಸಿದರು.

*ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ fitness ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು‌. Fitness ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ಸಹಿಸಲ್ಲ ಎಂದು ಖಡಕ್ ಸೂಚನೆ ನೀಡಲಾಯಿತು.

*ಹಣಕ್ಕೆ ಕೊರತೆ ಇಲ್ಲ. PD ಖಾತೆಯಲ್ಲಿ ಹಣ ಸಂಗ್ರಹ ಇದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಿ.

*ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದ ಗ್ರಾಮಗಳ ಸ್ಥಳಾಂತರದ ಬಗ್ಗೆ ಹಿಂದಿನ ಎಲ್ಲಾ ಇಲಾಖೆ ಅನುಭವಗಳನ್ನು ಪರಿಗಣಿಸಿ ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಲಾಯಿತು.

*ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳು…

*ಮಹಾರಾಷ್ಟ್ರ, ಉಜನಿಯಲ್ಲಾಗುವ ಮಳೆ ಜೊತೆಗೆ ನಮ್ಮಲ್ಲೂ ಬೀಳುತ್ತಿರುವ ದಾಖಲೆ ಮಳೆ ಸೇರಿ ಅನಾಹುತದ ಪ್ರಮಾಣ ಹೆಚ್ಚಾಗುತ್ತಿದೆ.

*ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸಿಎಂ ಸೂಚಿಸಿದರು.

*ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ fitness ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು‌. Fitness ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ಸಹಿಸಲ್ಲ ಎಂದು ಖಡಕ್ ಸೂಚನೆ ನೀಡಲಾಯಿತು.

*ಹಣಕ್ಕೆ ಕೊರತೆ ಇಲ್ಲ. PD ಖಾತೆಯಲ್ಲಿ ಹಣ ಸಂಗ್ರಹ ಇದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಿ.

*ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದ ಗ್ರಾಮಗಳ ಸ್ಥಳಾಂತರದ ಬಗ್ಗೆ ಹಿಂದಿನ ಎಲ್ಲಾ ಇಲಾಖೆ ಅನುಭವಗಳನ್ನು ಪರಿಗಣಿಸಿ ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಲಾಯಿತು.

*ಪ್ರವಾಹದಿಂದ ಕೃಷಿ ಭೂಮಿಯ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿರುತ್ತದೆ. ಇದರಿಂದ ಪರಿಹಾರ ಕೊಟ್ಟರೂ ಬೆಳೆ ಬೆಳೆಯುವುದು ಕಷ್ಟ. ಹೀಗಾಗಿ ಕೆರೆಗಳಲ್ಲಿರುವ ಫಲವತ್ತಾದ ಹೂಳನ್ನು ತೆಗೆದು ಫಲವತ್ತತೆ ಕಳೆದುಕೊಂಡ ಕೃಷಿ ಭೂಮಿಗೆ ಹಾಕಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಬಗ್ಗೆ ಚರ್ಚಿಸಲಾಯಿತು.‌

*ಪ್ರವಾಹ ಪೀಡಿಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಧ್ಯಂತರ ಅವಧಿಗೆ “ಪ್ರಕೃತಿ ವಿಕೋಪದಿಂದ ಆದ ಹಾನಿ” ಎಂದು ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಯಿತು. ಕೆಲವು ಜಿಲ್ಲಾಧಿಕಾರಿಗಳು ಮಾತ್ರ ಹೊರಡಿಸಿದ್ದು ಉಳಿದವರೂ ಹೊರಡಿಸಿ ಎಂದು ಸೂಚಿಸಿದರು.

*ಕೃಷಿ ವಿಮೆ ಸಮರ್ಪಕವಾಗಿ ಒದಗಿಸುವಂತೆ ವಿಮಾ ಕಂಪನಿಗಳಿಗೆ ಖಡಕ್ ಸೂಚನೆ ನೀಡಬೇಕು*

*ಜಿಲ್ಲಾಧಿಕಾರಿಗಳು ಬ್ಯಾಂಕರ್ ಗಳ ಜೊತೆಗೆ ಚರ್ಚಿಸಬೇಕು. ಸಂತ್ರಸ್ಥ ರೈತರ ನೆರವಿಗೆ ಧಾವಿಸುವಂತೆ ಸೂಚಿಸಲಾಯಿತು*

*ಗ್ರಾಮೀಣ ನೀರು ಸರಬರಾಜು ವ್ಯವಸ್ಥೆ ಪರೀಕ್ಷಿಸಬೇಕು. ಅಂತರ್ಜಲ ಕಲುಷಿತಗೊಳ್ಳುವ ಅಪಾಯ ಇರುವು

*ಸಾಂಕ್ರಾಮಿಕ ರೋಗಗಳು ಹೆಚ್ಚುವ ಅಪಾಯವಿದ್ದು ಆರೋಗ್ಯ ರಕ್ಷಣೆಗೆ ಗಮನ ಹರಿಸಿ. ಶಾಲಾ ಮಕ್ಕಳ ಹಾಸ್ಟೆಲ್ ಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಿ*

*ಮಳೆಯಲ್ಲಿ ದಾಖಲೆಗಳು, ಗುರುತಿನ ಚೀಟಿ ಕೊಚ್ಚಿ ಹೋಗಿರುವ , ಹಾಳಾಗಿರುವುದು ವರದಿಯಾಗಿದೆ. ಆ ಜನರು ಆತಂಕ ಪಡುವ ಅಗತ್ಯ ಇಲ್ಲದಂತೆ ಅಭಿಯಾನದ ರೂಪದಲ್ಲಿ ಹೊಸ ಗುರುತಿನ ಚೀಟಿ, ದಾಖಲೆಗಳು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

*ಜಂಟಿ ಸಮೀಕ್ಷೆ ಅತ್ಯಂತ ಸಮರ್ಪಕ ಮತ್ತು ವೈಜ್ಞಾನಿಕವಾಗಿರುವಂತೆ ಎಚ್ಚರ ವಹಿಸಿ.*

*ಅಂದಾಜು ಕಂದಾಯ ಇಲಾಖೆಯಿಂದ ಸಾವಿರ ಕೋಟಿಯಷ್ಟು ಪರಿಹಾರ ಕೊಡಬೇಕಾಗಬಹುದು ಎನ್ನುವ ಅಂದಾಜಿನಲ್ಲಿ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ*

*ಮಹಾರಾಷ್ಟ್ರ ಸರ್ಕಾರ ಪ್ರವಾಹಕ್ಕೆ 2200 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಮಹಾರಾಷ್ಟ್ರಕ್ಕೆ ಕೊಡುವ ಮಾದರಿಯಲ್ಲೇ ರಾಜ್ಯಕ್ಕೂ ಪರಿಹಾರ ಹಣವನ್ನು ಬಿಡುಗಡೆಗೊಳಿಸುವಂತೆ ಕೇಂದ್ರ ಕ್ಕೆ ಒತ್ತಾಯಿಸಲು ಸಭೆ ತೀರ್ಮಾನಿಸಿತು.

*ಹವಾಮಾನ ಬದಲಾವಣೆಯ ತೀವ್ರ ಪರಿಣಾಮವನ್ನು ರಾಜ್ಯ ಎದುರಿಸುತ್ತಿದೆ. ಒಟ್ಟು ಎಂಟು ಜಿಲ್ಲೆಗಳಲ್ಲಿ ಇದರ ಪರಿಣಾಮ ಮತ್ತು ಅನಾಹುತಗಳು ಆಗಿವೆ.

*SDRF ಪ್ರಕಾರ ಪರಿಹಾರದ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕು ಎನ್ನುವ ಬೇಡಿಕೆ ಇದೆ. ಹೆಕ್ಟೇರ್ ಗೆ 8500ರೂ, ತರಿ ನೀರಾವರಿ ಜಮೀನಿಗೆ 17 ಸಾವಿರ ಇದೆ. ಕೆರೆ ಕ್ರಾಪ್ ಗೆ 22 ಸಾವಿರದ 500 ರೂಪಾಯಿ ಸಮೀಕ್ಷೆ ಮುಗಿದ ತಕ್ಷಣ ಈ ಮಾನದಂಡದಲ್ಲಿ ಪರಿಹಾರ ಬಿಡುಗಡೆಗೆ ಕಂದಾಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.‌

*10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಇದುವರೆಗೂ 5 ಲಕ್ಷ ಹೆಕ್ಟೇರ್ ಮಾತ್ರ ಜಂಟಿ ಸಮೀಕ್ಷೆ ಆಗಿದೆ. 5 ಲಕ್ಷ ಬಾಕಿ ಇದೆ.

Leave a Reply

Your email address will not be published. Required fields are marked *

error: Content is protected !!