ಕಲಬುರಗಿ,-ಕಲಬುರಗಿ ಕೇಂದ್ರ ಕಾರಾಗೃಹದ ಲಿಪಿಕ/ ಕಾರ್ಯನಿರ್ವಾಹಕ ಅಧಿಕಾರಿ/ಸಿಬ್ಬಂದಿಗಳು ಬುಧವಾರ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಸಿ ನೆಡುವುದರ ಮೂಲಕ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ| ಅನಿತಾ ಆರ್. ಅವರು ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕರುಗಳಾದ ಬಿ. ಸುರೇಶ, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿಯಾದ ಭೀಮಾಶಂಕರ ಡಾಂಗೆ, ಸಂಸ್ಥೆಯ ಜೈಲರ್‍ಗಳಾದ ಸುನಂದ ವಿ., ಪುಂಡಲಿಕ ಟಿ.ಕೆ. ಶ್ಯಾಮ ಬಿದ್ರಿ, ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಕಾರಾಗೃಹ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ


